ದೆಹಲಿಯಲ್ಲಿ ಲಾಕ್‌ಡೌನ್ ವಿಸ್ತರಣೆ

ನವದೆಹಲಿ, ಏ.೨೫- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಮೇ ತಿಂಗಳ ೩ ರವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದೆ.

ಈ ಕುರಿತು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ನಿತ್ಯ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದರ ತಡೆಗೆ ಲಾಕ್ ಡೌನ್ ಒಂದೇ ಪರಿಹಾರ ಎಂದು ಅವರು ತಿಳಿಸಿದ್ದಾರೆ.

ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ತಡೆಗೆ ಆರು ದಿನಗಳ ಲಾಕ್ ಡೌನ್ ಅವಧಿ ನಾಳೆ ಬೆಳಗ್ಗೆ ಐದು ಗಂಟೆಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಮತ್ತೆ ಮೇ ೩ರ ವರೆಗೆ ಲಾಕ್ ಡೌನ್ ವಿಸ್ತರಣೆಯಾಗಲಿದೆ ಎಂದು ಅವರು ಹೇಳಿದರು.

ದೆಹಲಿಯಲ್ಲಿ ದಿನನಿತ್ಯ ದಾಖಲೆ ಪ್ರಮಾಣದಲ್ಲಿ ಕೊರೊನಾ ಸೋಂಕು ಹೆಚ್ಚುತ್ತದೆ ಇದರ ತಡೆಗೆ ಸರ್ಕಾರದ ಮುಂದಿರುವ ಏಕೈಕ ಮಾರ್ಗ ಇದು. ಜನರು ಕೂಡ ಸರ್ಕಾರದ ಜೊತೆ ಕೈಜೋಡಿಸಿ ಸೋಂಕು ತಡೆಗೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ದೆಹಲಿಯಲ್ಲಿ ಲಾಕ್ ಡೌನ್ ಮೇ ತಿಂಗಳ ೩ರ ಮುಂಜಾನೆ ೫ ಗಂಟೆಯ ತನಕ ಇರಲಿದೆ. ಜನರು ಅನಗತ್ಯವಾಗಿ ಮನೆಬಿಟ್ಟು ಬರದಿರಿ ಎಂದು ಕೂಡ ಅವರು ಮನವಿ ಮಾಡಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ಅಗತ್ಯ ಸೇವೆಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುದಿಲ್ಲ.ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಲಾಲ್ ಡೌನ್ ಮೇ ತಿಂಗಳ ೩ ರವರೆಗೆ ವಿಸ್ತರಣೆ ಮಾಡಲಾಗಿದೆ .ಇದುವರೆಗೂ ಇರುವ ನಿಯಮಗಳನ್ನು ಮುಂದುವರಿಸಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಮಾಡಲಾಗಿದೆ ಖಾಸಗಿ ಕಂಪನಿಗಳಲ್ಲಿ ಮತ್ತು ಸಂಸ್ಥೆಗಳಲ್ಲಿ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ಮಾಡಲು ಅವಕಾಶ ಮಾಡಿಕೊಡಲಾಗಿದೆ
ಜೊತೆಗೆ ಅಗತ್ಯ ಸೇವೆಗಳ ಎಂದಿನಂತೆ ಮುಂದುವರೆಯಲಿದೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ದಿನನಿತ್ಯ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ ಶೇಕಡಾ ೩೬ರಷ್ಟು ೩೭ ಕ್ಕೆ ಏರಿಕೆಯಾಗಿದೆ ಎಂದು ಅವರು ತಿಳಿಸಿದರು.

ಆಮ್ಲಜನಕ ಕೊರತೆ

ದೆಹಲಿಯಲ್ಲಿ ದಿನನಿತ್ಯ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ೭೦೦ ಮೆಟ್ರಿಕ್ ಟನ್ ಆಮ್ಲಜನಕ ಅಗತ್ಯವಿದೆ ಆದರೆ ಕೇಂದ್ರ ಸರ್ಕಾರ ೪೯೦ ಮೆಟ್ರಿಕ್ ಟನ್ ಮಾತ್ರ ಪೂರೈಕೆ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ

ಆಮ್ಲಜನಕ ಕೊರತೆ ಇರುವುದರಿಂದ ಆಸ್ಪತ್ರೆಗಳಲ್ಲಿ ದಿನನಿತ್ಯ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗಿದೆ ಹೀಗಾಗಿ ಶ್ರೀಘ್ರವಾಗಿ ಆಮ್ಲಜನಕ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ