ದೆಹಲಿಯಲ್ಲಿ ಸೋಂಕು ಇಳಿಕೆ ಮೇ 31ರಿಂದ ಅನ್ ಲಾಕ್ ಪ್ರಕ್ರಿಯೆ: ಕೇಜ್ರಿವಾಲ್

ನವದೆಹಲಿ, ಮೇ. 28- ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಪ್ತಕರಣಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ (ಮೇ 31) ರಿಂದ ಅನ್ ಲಾಕ್ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಹೇಳಿದ್ದಾರೆ.
ಕಳೆದ 24 ತಾಸುಗಳ ಅವಧಿಯಲ್ಲಿ , 1100 ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಸೋಂಕಿನ ಪ್ರಮಾಣ ಶೇ.1.5ಕ್ಕೆ ಇಳಿಕೆಯಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಸೋಂಕು ತಡೆಗೆ ಜಾರಿಯಲ್ಲಿರುವ ಲಾಕ್ ಡೌನ್ ಸೋಮವಾರ ಅಂತ್ಯವಾಗುತ್ತಿದೆ. ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಪ್ರಮುಖವಾಗಿ ಕಟ್ಟಡ ನಿರ್ಮಾಣ ಮತ್ತು ಕಾರ್ಖಾನೆಗಳು ತೆರೆಯಲು ಅವಕಾಶ ನೀಡಲಾಗುತ್ತದೆ.ಇದರಿಂದ ದಿನಗೂಲಿ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದರು.
ಕೊರೋನಾ ಎರಡನೇ ಅಲೆಯ ಪ್ರಭಾವ ದೆಹಲಿಯಲ್ಲಿ ಕ್ರಮೇಣ ಇಳಿಮುಖವಾಗುತ್ತಿದೆ. ಸಕಾರಾತ್ಮಕ ದರ ಪ್ರಸ್ತುತ ಶೇ.2.5 ರಷ್ಟಿದೆ. ಈ ಸೋಂಕನ್ನು ಸಂಪೂರ್ಣವಾಗಿ ನಿರ್ಮೂಲನೆ ಗೊಳಿಸುವ ಸಲುವಾಗಿ ಮೇ 31ರ ಬೆಳಗ್ಗೆ 5 ಗಂಟೆಯ ವರೆಗೆ ಲಾಕ್​ಡೌನ್​ ಅನ್ನು ವಿಸ್ತರಿಸಲಾಗಿದೆ. ಇದೀಗ ಕೋವಿಡ್​ನಿಂದ ಗುಣಮುಖರಾಗುವವರ ಸಂಖ್ಯೆ ಏರಿಕೆಯಾಗಿದೆ. ದೈನಂದಿನ ವರದಿಯಾಗುವ ಪ್ರಕರಣಗಳಿಗಿಂತ ಗುಣಮುಖರಾಗುವವರ ಸಂಖ್ಯೆ ಹೆಚ್ಚಾಗಿದೆ.
ಹೀಗಾಗಿ ದೆಹಲಿ ಸರ್ಕಾರ ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆ ಆರಂಭಿಸಲು ಮುಂದಾಗಿದೆ.