ದೆಹಲಿಯಲ್ಲಿ ಸೋಂಕು ಹೆಚ್ಚಳ: ನಿಯಂತ್ರಣಕ್ಕೆ‌ ಬಿಗಿ ಕ್ರಮ

ನವದೆಹಲಿ, ಏ. 11-ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮದುವೆ ಮತ್ತು ಅಂತ್ಯ ಸಂಸ್ಕಾರಕ್ಕೆ ಜನರನ್ನು ನಿಯಂತ್ರಿಸಿ ಏಪ್ರಿಲ್ 30ರ ವರೆಗೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸಾಮಾಜಿಕ, ರಾಜಕೀಯ, ಧಾರ್ಮಿಕ, ಸಾಂಸ್ಕøತಿಕ, ಕ್ರೀಡೆ, ಮನರಂಜನೆ ಉತ್ಸವಗಳನ್ನು ಸಂಪೂರ್ಣವಾಗಿ ನಿಷೇಧ ಮಾಡಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದಾರೆ

ಅಂತ್ಯಸಂಸ್ಕಾರಕ್ಕೆ 20 ಜನ ಹಾಗೂ ಮದುವೆಗೆ 50 ಜನರನ್ನು ಮಿತಿಗೊಳಿಸಿದೆ. ರೆಸ್ಟೋರೆಂಟ್, ಬಾರ್‍ಗಳು ಹಾಗೂ ಚಿತ್ರಮಂದಿರಗಳಲ್ಲಿ ಶೇಕಡ 50ರ ಸಾಮಥ್ರ್ಯಕ್ಕೆ ಅನುವು ಮಾಡಿಕೊಡಲಾಗಿದೆ.

ಈಜುಕೊಳಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ದೆಹಲಿ ಮೆಟ್ರೊ, ದೆಹಲಿ ಸಾರಿಗೆ ಸಂಸ್ಥೆ, ಅಂತಾರಾಜ್ಯ ಸಾರಿಗೆ ಬಸ್‍ಗಳಲ್ಲಿ ಶೇಕಡ 50ರ ಸಾಮಥ್ರ್ಯ ಮೀರದಂತೆ ನೋಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಕಾಲೇಜುಗಳು, ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ. 9ರಿಂದ 12ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆಗೆ ಸಂಬಂಧಿಸಿದ ಅಥವಾ ಗೊಂದಲಗಳನ್ನು ಪರಿಹರಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.

ವರದಿ ಕಡ್ಡಾಯ:

ಮಹಾರಾಷ್ಟ್ರದಿಂದ ದೆಹಲಿಗೆ ವಿಮಾನದ ಮೂಲಕ ಬರುವ ಎಲ್ಲ ಪ್ರಯಾಣಿಕರು ಕಡ್ಡಾಯವಾಗಿ ತಮ್ಮ ಜೊತೆ ಆರ್ ಟಿ- ಪಿಸಿಆರ್ ವರದಿಯನ್ನು ತರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ

ಪ್ರಯಾಣಕ್ಕೂ 72 ಗಂಟೆಗಳ ಮುನ್ನ ಪರೀಕ್ಷೆ ನಡೆಸುವಂತೆಯೂ ಸೂಚಿಸಲಾಗಿದೆ. ನೆಗೆಟಿವ್ ವರದಿ ಇದ್ದರೂ 14 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್‍ನಲ್ಲಿ ಇರುವಂತೆ ಸೂಚಿಸಲಾಗಿದೆ.