ದೆಹಲಿಯಲ್ಲಿ ‌ಸೋಂಕು ಹೆಚ್ಚಳ: ಮಾರುಕಟ್ಟೆ ಪ್ರದೇಶ ಲಾಕ್ ಡೌನ್ ಗೆ ಆಪ್ ಸರ್ಕಾರ ಚಿಂತನೆ

ನವದೆಹಲಿ, ನ 17- ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದು‌ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಗಳನ್ನು ಲಾಕ್ಚಡೌನ್ ಮಾಡಲು ದೆಹಲಿ ಸರ್ಕಾರ ಮುಂದಾಗಿದೆ.
ವಿವಾಹ ಹಾಗೂ ಇತರ ಕಾರ್ಯಕ್ರಮ ಗಳಿಗೆ 200 ಮಂದಿ ಭಾಗವಹಿಸಲು ಅನುಮತಿ ನೀಡಿರುವುದನ್ನು ವಾಪಸ್ ಪಡೆಯಲು ಮುಖ್ಯಮಂತ್ರಿ ಕೇಜ್ರಿವಾಲ್ ನೇತ್ರತ್ವದ ಸರ್ಕಾರ ತೀರ್ಮಾನಿಸಿದೆ.
ಕೊರೊನಾ ಹಾಟ್ ಸ್ಪಾಟ್ ಗಳಾಗಿ ಪರಿವರ್ತನೆ ಯಾಗುವ ಆತಂಕ ತಲೆದೋರಿದ್ದು, ಮಾರುಕಟ್ಟೆ ಪ್ರದೇಶಗಳನ್ನು ಲಾಕ್ ಡೌನ್ ಮಾಡಲು ಅಧಿಕಾರ ನೀಡುವಂತೆ ಕೇಂದ್ರದ ಅನುಮತಿ ಕೋರಿದೆ.
ಅನ್ ಲೈನ್ ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿರುವ ಮುಖ್ಯಮಂತ್ರಿ ಕೇಜ್ರಿವಾಲ್, ಪ್ತಸ್ತಾವನೆ ಕೋರಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅನುನತಿಗಾಗಿ ಕಳುಹಿಸಲಾಗಿದೆ‌ ಎಂದರು.
ಮದುವೆ ಹಾಗೂ ಇತರ ಕಾರ್ಯಕ್ರಮಗಳಲ್ಲಿ 200 ಮಂದು ಬದಲಿಗೆ 50 ಜನರು ಭಾಗವಹಿಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ದೀಪಾವಳಿ ಹಬ್ಬದ ಸಮಯದಲ್ಲಿ ರಾಜಧಾನಿಯ ಮಾರುಕಟ್ಟೆ ಸೇರಿದಂತೆ ಹಲವು ಕಡೆಗಳಲ್ಲಿ ಜನರು ಮಾಸ್ಕ್‌ ಧರಿಸದೆ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೇ ಓಡಾಡುತ್ತಿದ್ದದು ಕಂಡುಬಂದಿತ್ತು. ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿರುವ ಕಡೆಗಳಲ್ಲಿ ಕೊರೊನಾ ಸೋಂಕು ಹೆಚ್ಚುವ ಸಾಧ್ಯತೆ ಇದೆ. ಹೀಗಾಗಿ ಮಾರುಕಟ್ಟೆ ಪ್ರದೇಶಗಳ್ಲಲಿ ಲಾಕ್‌ಡೌನ್ ಜಾರಿಗೊಳಿಸಬೇಕಾದ ಅನಿವಾರ್ಯ ಎದುರಾಗಿದೆ ಎಂದು ಕೇಜ್ರಿವಾಲ್ ವಿವರಿಸಿದರು.