ದೆಹಲಿಯ ಸೋಂಕಿತರಿಗೆ ಉ.ಕ. ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಬೆಂಗಳೂರು, ಮೇ ೪- ರಾಜ್ಯದಲ್ಲಿ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದಿರುವ ಸಂದರ್ಭದಲ್ಲಿ ದೆಹಲಿಯ ಅವರಿಗೆ ಉತ್ತರ ಕರ್ನಾಟಕದ ಅನೇಕ ಆಸ್ಪತ್ರೆಗಗಳಲ್ಲಿ ಚಿಕಿತ್ಸೆ ನೀಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.
ರಾಷ್ಟ್ರರಾಜಧಾನಿ ದೆಹಲಿಯ ಕೋರನಾ ಸೋಂಕಿತರಿಗೆ ಉತ್ತರ ಕರ್ನಾಟಕದ ಬಹುತೇಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೆಸರು ಹೇಳಲಿಚ್ಚಿಸದ ವೈದ್ಯರೊಬ್ಬರು ತಿಳಿಸಿದ್ದಾರೆ.
ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಬಿಗಿ ಬದ್ರತೆ ಇಲ್ಲದಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಅನೇಕ ಸೋಂಕಿತರನ್ನು ಉತ್ತರ ಕರ್ನಾಟಕದ ಆಸ್ಪತ್ರೆಗಳಿಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸೋಂಕಿತರು ಕೂಡ ತಮ್ಮ ದಾಖಲೆಗಳನ್ನು ತಿದ್ದಿ ಉತ್ತರ ಕರ್ನಾಟಕದ ಹಲವು ಆಸ್ಪತ್ರೆಗಳಿಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.
ಉತ್ತರ ಕರ್ನಾಟಕ ಭಾಗದ ಹಲವು ಆಸ್ಪತ್ರೆಗಳಲ್ಲಿ ಅದರಲ್ಲೂ ಗದಗ ಸೇರಿದಂತೆ ವಿವಿಧ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ದೆಹಲಿಯಿಂದ ಕರ್ನಾಟಕಕ್ಕೆ ಬಂದವರಲ್ಲಿ ಆರ್ ಟಿ ಪಿಸಿಆರ್ ನೆಗೆಟೀವ್ ವರದಿ ಬಂದಿದೆ ಆನಂತರ ಅವರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಗದಗದ ಡಾ. ಎನ್ ಬಿ. ಪಾಟೀಲ್ ಆಸ್ಪತ್ರೆಯ ಡಾ.ಪವನ್ ಪಾಟೀಲ್ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಕನಿಷ್ಠ ಮೂವತ್ತಕ್ಕೂ ಹೆಚ್ಚು ದೆಹಲಿಯವರೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ.
ದೆಹಲಿ ಅಲ್ಲದೆ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಬಂದ ಸೋಂಕಿತರಿಗೆ ಉತ್ತರ ಕರ್ನಾಟಕದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ನೋಯಿಡಾ ದೆಹಲಿಯಿಂದ ಏಪ್ರಿಲ್ ಮೊದಲ ಎರಡು ವಾರಗಳಲ್ಲಿ ಹೆಚ್ಚು ಮಂದಿ ಸೋಂಕಿತರು ಉತ್ತರ ಕರ್ನಾಟಕದ ವಿವಿಧ ಆಸ್ಪತ್ರೆಗಳಿಗೆ ಬಂದು ಚಿಕಿತ್ಸೆ ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ