ದೆಹಲಿ: 9 ಮತ್ತು 11 ತರಗತಿ ಪರೀಕ್ಷೆ ರದ್ದು: ನಾಳೆಯಿಂದ ಆನ್ ಲೈನ್ ಪ್ರವೇಶಕ್ಕೆ ಅನುಮತಿ

ನವದೆಹಲಿ, ಜೂ.11- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿರುವ ನಡುವೆಯೇ ಮುನ್ನೆಚ್ಚರಿಕೆಯ ಕ್ರಮವಾಗಿ 9 ಮತ್ತು 11 ನೇ ತರಗತಿಯ ಪರೀಕ್ಷೆಗಳನ್ನು ದೆಹಲಿ ಸರ್ಕಾರ ರದ್ದುಮಾಡಿದೆ.

ಅರ್ಧವಾರ್ಷಿಕ ಪರೀಕ್ಷೆಗಳ ಅಂಕಗಳ ಆಧಾರದ ಮೇಲೆ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ದೆಹಲಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾ ಸೋಂಕು ಹಿನ್ನೆಲೆಯಲ್ಲಿ 9 ಮತ್ತು 11 ತರಗತಿ ಪರೀಕ್ಷೆ ರದ್ದು ಮಾಡಲಾಗಿದೆ.ಅರ್ದ ವಾರ್ಷಿಕ ಪರೀಕ್ಷೆಯ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಅಂಕ ನೀಡಲಾಗುವುದು ಎಂದು ಹೇಳಿದ್ದಾರೆ

ನಾಳೆಯಿಂದ ಆನ್ ಲೈನ್ ತರಗತಿ;

ದೆಹಲಿಯ ಸರ್ಕಾರಿ ಶಾಲೆಗಳಲ್ಲಿ 6ರಿಂದ 9ನೇ ತರಗತಿಗೆ ಪ್ರವೇಶ ಪ್ರಕ್ರಿಯೆ ಆನ್ ಲೈನ್ ಮೂಲಕ ನಡೆಯಲಿದೆ. ಜೂನ್ 30ರ ತನಕ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು ವಿದ್ಯಾರ್ಥಿಗಳು ಆನ್ ಲೈನ್ ಮೂಲಕವೇ ನೋಂದಣಿ ಮಾಡಿಕೊಂಡು ಪ್ರವೇಶ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

ಖಾಸಗಿ ಶಾಲೆಗಳು ಕೂಡ ಮಧ್ಯವಾರ್ಷಿಕ ಪರೀಕ್ಷೆಯನ್ನು ನಡೆಸಿ ಅದರ ಆಧಾರದ ಮೇಲೆ ವಾರ್ಷಿಕ ಫಲಿತಾಂಶವನ್ನು ಪ್ರಕಟಿಸಬೇಕು ಎಂದು ಖಾಸಗಿ ಶಾಲೆಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿದ್ಯಾರ್ಥಿಗಳ ಎರಡು ವಿಷಯಗಳ ಅತ್ಯುತ್ತಮ ಅಂಕಗಳನ್ನು ಮಾನದಂಡವನ್ನಾಗಿ ಇಟ್ಟುಕೊಂಡು ಅವರನ್ನು ಮುಂದಿನ ತರಗತಿಗೆ ಉತ್ತೀರ್ಣನಾಗಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಜೂ. 22 ರಂದು ಫಲಿತಾಂಶ:

ದೆಹಲಿಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 9 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶವನ್ನು ಈ ತಿಂಗಳ 22 ರಂದು ಶಾಲೆಗಳು ಪ್ರಕಟಿಸುವಂತೆ ಸೂಚಿಸಿದ್ದಾರೆ

ದೆಹಲಿ: 9 ಮತ್ತು 11 ತರಗತಿ ಪರೀಕ್ಷೆ ರದ್ದು:
ನಾಳೆಯಿಂದ ಆನ್ ಲೈನ್ ಪ್ರವೇಶಕ್ಕೆ ಅನುಮತಿ