ದೇವದತ್ತ ಪಡಿಕ್ಕಲ್ ಅವರ ಬ್ಯಾಟಿಂಗ್ ನೋಡಿ ಖುಷಿ ಆಯಿತು: ಗಂಗೂಲಿ

ದುಬೈ, ಸೆ.22 – ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ದೇವದತ್ತ ಪಡಿಕ್ಕಲ್ ಅವರನ್ನು ಶ್ಲಾಘಿಸಿದರು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಪಡಿಕ್ಕಲ್ ಅವರ ಅದ್ಭುತ ಇನ್ನಿಂಗ್ಸ್ ಅನ್ನು ನೋಡಿದ್ದು ಸಂತೋಷ ನೀಡಿದೆ ಎಂದು ಹೇಳಿದರು.

ಐಪಿಎಲ್ ಚೊಚ್ಚಲ ಪಂದ್ಯದಲ್ಲಿ ಎಂಟು ಬೌಂಡರಿಗಳೊಂದಿಗೆ 42 ಎಸೆತಗಳಲ್ಲಿ 56 ರನ್ ಗಳಿಸಿದ ಪಡಿಕ್ಕಲ್ ಎಲ್ಲರನ್ನು ಅಚ್ಚರಿಗೊಳಿಸಿದರು. ಅವರು ಏರಾನ್ ಫಿಂಚ್ ಅವರೊಂದಿಗೆ ಬೆಂಗಳೂರಿಗೆ ಬಲವಾದ ಆರಂಭವನ್ನು ನೀಡಿದರು.

“ಪಡಿಕ್ಕಲ್ ಅವರ ಶ್ರೇಷ್ಠ ಇನ್ನಿಂಗ್ಸ್ ನೋಡಿ ಸಂತೋಷವಾಯಿತು. ಎಡಗೈ ಬ್ಯಾಟ್ಸ್‌ಮನ್ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದಾರೆ” ಎಂದು ಗಂಗೂಲಿ ಟ್ವೀಟ್ ಮಾಡಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕ ಪರ ಆಡಿದ ಪಡಿಕ್ಕಲ್, 2019-20ರ ಕ್ರೀಡಾ ಋತುವಿನಲ್ಲಿ ವಿಜಯ್ ಹಜಾರೆ ಟ್ರೋಫಿ ಮತ್ತು ಸೈಯದ್ ಮುಷ್ತಾಕ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪಡಿಕ್ಕಲ್ 2018 ರಲ್ಲಿ ಪ್ರಥಮ ದರ್ಜೆ ಪ್ರವೇಶ ಮಾಡಿದ್ದರು