ದೇವದಾಸಿ ಮಹಿಳೆಯರಿಗೆ ಉಚಿತವಾಗಿ ಆಹಾರದ ಕಿಟ್ ವಿತರಣೆ

ಲಿಂಗಸುಗೂರು.ಮೇ.೩೧-ತಾಲೂಕಿನ ಬರುವ ಹಾಗೂ ನಗರದ ದೇವದಾಸಿ ಮಹಿಳೆಯರಿಗೆ ಉಚಿತವಾಗಿ ಆಹಾರದ ಕಿಟ್ ವಿತರಣೆ ಮಾಡುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಮಾಯವಾಗಿದೆ ಇದರಿಂದ ಸಂಸ್ಥೆಯ ಸಾಮಾಜಿಕ ಕಳಕಳಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ತಾಲೂಕಿನಲ್ಲಿರುವ ಬಹುತೇಕ ಗ್ರಾಮಗಳಲ್ಲಿ ದೇವದಾಸಿ ಮಹಿಳೆಯರು ಹೇಚ್ಚಾಗಿರುವದರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ
ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಂಸ್ಥೆಯಿಂದ ಉಚಿತವಾಗಿ ೨೦೦ಜನ ಮಹಿಳ ದೇವದಾಸಿ ಮಹಿಳೆಯರಿಗೆ ಉಚಿತವಾಗಿ ಆಹಾರದ ಕಿಟ್ ವಿತರಣೆ ಮಾಡುವ ಮೂಲಕ ದೇವದಾಸಿ ಮಹಿಳೆಯರು ಆಹಾರದ ಕಿಟ್ ಪಡೆದು ತಮ್ಮ ಗ್ರಾಮೀಣ ಪ್ರದೇಶಕ್ಕೆ ತೇರಳಿದರು.
ತಾಲೂಕಿನಲ್ಲಿ ಇರುವ ಸುಮಾರು ೫೦೦ಜನ ಮಹಿಳಾ ದೇವದಾಸಿ ಮಹಿಳೆಯರಿಗೆ ನಮ್ಮ ಸಂಸ್ಥೆಯಿಂದ ಆಹಾರದ ಕಿಟ್ ವಿತರಣೆ ಮಾಡಲಾಗುವುದು ಎಂದು ಸಂಸ್ಥೆಯ ಕಾರ್ಯದರ್ಶಿ ಹೇಮಂತ್ ಕುಮಾರ್ ಇವರು ಹೇಳಿದರು. ಸಂಸ್ಥೆಯ ಸಿಬ್ಬಂದಿ ರತ್ತಾ, ಲಕ್ಷ್ಮಿ ಪ್ರಸಾದ್ ಸೇರಿದಂತೆ ಇತರರು ಇದ್ದರು.