ದೇವರದಾಸಿಮಯ್ಯ ಜಯಂತಿ ಸಾಂಕೇತಿಕ ಆಚರಣೆ

ಪುತ್ತೂರು, ಎ.೧೮- ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರು ತಾಲೂಕು ಕಚೇರಿಯ ಸಭಾಂಗಣದಲ್ಲಿ ದೇವರ ದಾಸಿಮಯ್ಯ ಅವರ ಜಯಂತಿಯನ್ನು ಶನಿವಾರ ಸಾಂಕೇತಿಕವಾಗಿ ಆಚರಿಸಲಾಯಿತು.

ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು ಅವರು ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ದೇಶದಲ್ಲಿ ಕೊರೊನಾ ಎರಡನೆ ಅಲೆ ಅತ್ಯಂತ ಹೆಚ್ಚಾಗಿ ಭಾದಿಸುತ್ತಿದ್ದು, ಸರ್ಕಾರದ ಆದೇಶದಂತೆ ಸರಳ ರೀತಿಯಲ್ಲಿ ದೇವರ ದಾಸಿಮಯ್ಯ ಜಯಂತಿಯನ್ನು ಆಚರಿಸಲಾಗುತ್ತಿದೆ. ಮುಂಬರುವ ಯಾವುದೇ ಹಬ್ಬ ಮತ್ತು ಜಯಂತಿ ಆಚರಣೆಗಳಲ್ಲಿ ಸಾರ್ವಜನಿಕವಾಗಿ ಸಮಾರಂಭಗಳನ್ನು ಆಚರಣೆ ಮಾಡದಂತೆ ಸರ್ಕಾರ ಆದೇಶ ನೀಡಿದೆ. ಸಭೆಗಳನ್ನು ಕೂಡಾ ನಡೆಸುವಂತಿಲ್ಲ. ಹಾಗಾಗಿ ಎಪ್ರಿಲ್ ತಿಂಗಳಲ್ಲಿ ಬರುವ ಯಾವುದೇ ಆಚರಣೆಗಳು ಕೇವಲ ಸಾಂಕೇತಿಕ ನೆಲೆಯಲ್ಲಿ ಆಚರಣೆ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಸೂಚನೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸರಳ ರೀತಿಯಲ್ಲಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಕಚೇರಿಯ ಸಿಬಂದಿ ವರ್ಗ ಹಾಜರಿದ್ದರು.