ದೇವರ ದಾಸಿಮಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ

ಬೀದರ,ಮಾ.19: ದೇವರ ದಾಸಿಮಯ್ಯ ಜಯಂತಿಯನ್ನು ಮಾರ್ಚ್ 26 ರಂದು ನಡೆಯುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.

ಅವರು ಶನಿವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ದೇವರ ದಾಸಿಮಯ್ಯ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್ ಸಮಯದಲ್ಲಿ ಜಯಂತಿಗಳನ್ನು ಮಾಹಾನ್ ವ್ಯಕ್ತಿಗಳ ಪೆÇೀಟೊ ಪೂಜೆ ಮಾಡುತ್ತಿದ್ದೆವು ಈಗ ಹಾಗಿಲ್ಲ ದೇವರ ದಾಸಿಮಯ್ಯ ಅವರ ಜಯಂತಿಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ. ಮಾರ್ಚ್ 26 ರಂದು ಬೆಳಿಗ್ಗೆ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿಯ ತಮ್ಮ- ತಮ್ಮ ಕಚೇರಿಗಳಲ್ಲಿ ಬೆಳಿಗ್ಗೆ 8.30ಕ್ಕೆ ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆಯುವ ದೇವರ ದಾಸಿಮಯ್ಯ ಭಾವಚಿತ್ರ ಪೂಜೆ ನಂತರ ನಡೆಯುವ ಮೆರವಣಿಗೆ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕು ಎಂದರು.

ದೇವರ ದಾಸಿಮಯ್ಯ ಭಾವಚಿತ್ರದ ಮೆರವಣಿಗೆ ಶಿವಾಜಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಕರಿಯಪ್ಪ ವೃತ್ತದ ಮುಖಾಂತರ ಜಿಲ್ಲಾ ರಂಗಮಂದಿರ ಸೇರಲಿದ್ದು, ಅಲ್ಲಿ 12.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಎರಡು ಕಲಾ ತಂಡಗಳು ಈ ಮೆರವಣಿಗೆಯಲ್ಲಿ ಭಾಗವಹಿಸಲಿವೆ. ನಗರ ಸಭೆ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ ಮತ್ತು ಪೆÇೀಲಿಸರು ಬಂದೋಬಸ್ತ ಒದಗಿಸುತ್ತಾರೆ ಎಂದರು.

ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಅವರು ಮಾತನಾಡಿ, ಮೆರವಣಿಗೆ ಕಾರ್ಯಕ್ರಮ ಸರಿಯಾದ ಸಮಯದಲ್ಲಿ ನಡೆಯಬೇಕು ಅದಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುವುದರಿಂದ ವಿಶೇಷ ಅತಿಥಿ ಉಪನ್ಯಾಸಕರ ಭಾಷಣ ಕೇಳಲು ಸಮಯ ನೀಡುತ್ತಿಲ್ಲ ಹಾಗಾಗಿ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರ ಭಾಷಣಕ್ಕೆ ಹೆಚ್ಚು ಸಮಯ ಕೊಡಬೇಕು ಅಂದಾಗ ಮಾತ್ರ ದೇವರ ದಾಸಿಮಯ್ಯನವರ ತತ್ವ ಮತ್ತು ಸಿದ್ದಾಂತಗಳನ್ನು ನಾವು ತಿಳಿದುಕೊಳ್ಳಲು ಅನುಕೂಲವಾಗುತ್ತದೆ ಎಂದರು.

ಈ ಸಭೆಯಲ್ಲಿ ನೇಕಾರ ಸಮುದಾಯ ಒಕ್ಕೂಟದ ಅಧ್ಯಕ್ಷರಾದ ಸೋಮಶೇಖರ ಅಮಲಾಪೂರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ, ಜಿಲ್ಲಾ ವಾರ್ತಾಧಿಕಾರಿ ಜಿ. ಸುರೇಶ, ರಾಮಕೃಷ್ಣ. ಪ್ರಶಾಂತ ಸಿಂದ್ರೆ, ಮಾಹಾದೇವ, ಬಸವರಾಜ ನೇಕಾರ, ಗುಂಡಪ್ಪ, ಕನಕ, ರಾಜಶೇಖರ ಚಂದಾ ಸೇರಿದಂತೆ ಇತರರು ಉಪಸ್ಥಿತರಿದ್ದರು.