ದೇವರ ದಾಸಿಮಯ್ಯ ಜಯಂತಿ ಆಚರಣೆ

ಕಲಬುರಗಿ:ಏ.13: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ದೇವರ ದಾಸಿಮಯ್ಯ ಜಯಂತಿಯನ್ನು ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಶನಿವಾರ ಆಚರಿಸಲಾಯಿತು.
ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅಬ್ದುಲ್ ಅಜೀಮ್, ಜಿಲ್ಲಾಧಿಕಾರಿಗಳ ಶಿಷ್ಠಾಚಾರದ ತಹಶೀಲ್ದಾರ ಸೈಯದ್ ನಿಸಾರ ಅಹ್ಮದ್ ಅವರು ದೇವರ ದಾಸಿಮಯ್ಯನವರ ಭಾವಚಿತ್ರಕ್ಕೆ ಪುμÁ್ಪರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ, ಸಮಾಜದ ಮುಖಂಡರಾದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.