ದೇವರ ದಾಸಿಮಯ್ಯ ಜಯಂತಿ ಸರಳ ಆಚರಣೆ

ದಾವಣಗೆರೆ, ಏ.17; ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ  ಜಿಲ್ಲಾಡಳಿತ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಆದ್ಯ ವಚನಕಾರ ದೇವರ ದಾಸಿಮಯ್ಯ ಅವರ ಜಯಂತಿಯನ್ನು, ದೇವರದಾಸಿಮಯ್ಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ. ಅಧ್ಯಕ್ಷೆ ಕೆ.ವಿ. ಶಾಂತಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿ.ಪಂ.ಉಪಕಾರ್ಯದರ್ಶಿ ಆನಂದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಹಾಗೂ ದಾವಣಗೆರೆ ಜಿಲ್ಲೆಯ ನೇಕಾರ ವೇದಿಕೆ ಅಧ್ಯಕ್ಷ ಪ್ರೊ.ಎಲ್.ಸತ್ಯನಾರಾಯಣ್, ಸಮುದಾಯ ಒಕ್ಕೂಟದ ಅಧ್ಯಕ್ಷ ಡಿ.ಬಸವರಾಜ ಗುಬ್ಬಿ, ಪ್ರಧಾನ ಕಾರ್ಯದರ್ಶಿ ಧರ್ಮರಾಜ್ ಎಕಬೋಟೆ, ಉಪಾಧ್ಯಕ್ಷ ಬುಗಡೆ ಬೆನಕಲಪ್ಪ, ನಿರ್ದೇಶಕರಾದ ಗಣೇಶ್ ಕ್ಷೀರಸಾಗರಿ, ಕರಿಬಸಪ್ಪ ಐರಾಣಿ, ಪ್ರಸನ್ನ ಕುಮಾರ್, ಟಿ.ಅಜೇಶ್, ಪಾಲಾಕ್ಷಪ್ಪ, ರಂಗನಾಥ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ ಹಾಗೂ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.