ದೇವಸ್ಥಾನದ ಮೆಟ್ಡಿಲು ಬಾವಿ ಕುಸಿದು 13 ಮಂದಿ ಸಾವು

ಇಂದೋರ್, ಮಾ.30-ಶ್ರೀರಾಮ ನವಮಿ ಆಚರಣೆ ವೇಳೆ ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು 13 ಮಂದಿ ಮೃತಪಟ್ಟಿದ್ದಾರೆ.

ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದು ಮೃತರ ಸಂಖ್ಯೆ ಏರಿಕೆಯಾಗುವ ಭೀತಿ ಎದುರಾಗಿದೆ.

ರಾಮನವಮಿ ಅಂಗವಾಗಿ ಹೆಚ್ಚಿನ ಜನ ಸೇರಿದ್ದರಿಂದ ಬಾವಿಯ ಮೇಲ್ಭಾಗ ಕುಸಿದು ಈ ಅವಘಡ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

40 ಅಡಿ ಆಳವಿರುವ ಈ ಬಾವಿಯಲ್ಲಿ 18 ಮಂದಿ ಭಕ್ತರು ಬಾವಿಯೊಳಗೆ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಇದುವರೆಗು 13 ಮೃತದೇಹಗಳನ್ಬು ಹೊರತೆಗೆಯಲಾಗಿದೆ. ಮೃತರ ಪೈಕಿ 10 ಮಹಿಳೆಯರು ಸೇರಿದ್ದಾರೆ.

ಇದೊಂದು ದುರದೃಷ್ಟಕರ ಘಟನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಜನರನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ

ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.