ಸಿರವಾರ,ಜು.೧೫-
ತಾಲೂಕಿನ ಅತ್ತನೂರು ಗ್ರಾಮದ ದಿಡ್ಡಿ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಕಳ್ಳತನ ನಡೆದಿದೆ. ದೇವಸ್ಥಾನದ ಬಾಗಿಲ ಕೀಲಿ ಮುರಿದ ಕಳ್ಳರು ಸಿಸಿ ಕ್ಯಾಮರಾ ಯುನಿಟ್, ಸಾವಿರಾರು ರೂ. ಮೌಲ್ಯದ ಬೆಳ್ಳಿಯ ಪೂಜಾ ಸಾಮಗ್ರಿಗಳು ಹಾಗು ಎರಡು ದೊಡ್ಡ ಹುಂಡಿಗಳನ್ನು ಒಡೆದು ಅದರಲ್ಲಿದ್ದ ಹಣವನ್ನು ದೋಚಿದ್ದಾರೆ.
ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ದೇವಸ್ಥಾನ ಸಮಿತಿಯ ಅಧ್ಯಕ್ಷ ವೀರಭದ್ರಯ್ಯ ಸ್ವಾಮಿ ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಅಂಗಡಿ ಮುಂಗಟ್ಟುಗಳಲ್ಲದೇ, ಮನೆ ಹಾಗು ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ. ಈ ಬಗ್ಗೆ ಪೊಲೀಸರು ಸೂಕ್ತವಾದ ಭದ್ರತಾ ಕ್ರಮ ಕೈಗೊಂಡು, ಬಲೆ ಬೀಸಿ ಕಳ್ಳರನ್ನು ಬಂಧಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.