ದೇವಸ್ಥಾನ ಜೀರ್ಣೊದ್ಧಾರಕ್ಕೆ 25 ಲಕ್ಷ ರೂ. ಚೆಕ್ ವಿತರಣೆ


ಬೆಳಗಾವಿ, ಜ 3: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರಡಿಗುದ್ದಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶಾಸಕರ ನಿಧಿಯಿಂದ 25 ಲಕ್ಷ ರೂ.ಗಳ ಚೆಕ್‍ನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ದೇವಸ್ಥಾನದ ಕಮೀಟಿಯವರಿಗೆ ಹಸ್ತಾಂತರಿಸಿದರು.
ಕ್ಷೇತ್ರದ ಹಲವಾರು ದೇವಸ್ಥಾನಗಳ ಜೀರ್ಣೋದ್ಧಾರ, ಹೊಸ ದೇವಸ್ಥಾನಗಳ ನಿರ್ಮಾಣಕ್ಕೆ ಆರ್ಥಿಕ ಸಹಾಯ ನೀಡಿದ್ದೇನೆ. ದೇವಸ್ಥಾನಗಳಿಂದ ಗ್ರಾಮದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗಲಿದೆ. ಜನರ ಆಯುಷ್ಯ, ಆರೋಗ್ಯ ಸುಧಾರಿಸಲಿ, ಜೀವನಮಟ್ಟ ಸುಧಾರಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ನುಡಿದರು.
ಕ್ಷೇತ್ರದ ಜನರು ನನ್ನ ಮತ್ತು ಕಾಂಗ್ರೆಸ್ ಪಕ್ಷದ ಮೇಲಿಟ್ಟಿರುವ ವಿಶ್ವಾಸಕ್ಕೆ ನಾನು ಋಣಿಯಾಗಿದ್ದೇನೆ. ವಿಧಾನಸಭೆ ಚುನಾವಣೆಯಂತೆಯೇ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕೂಡ ಕ್ಷೇತ್ರದ ಜನರು ಬೆಂಬಲಿಸಿದ್ದಾರೆ. ಇದೇ ವಿಶ್ವಾಸ ಶಾಶ್ವತವಾಗಿರಲಿ ಎಂದು ವಿನಂತಿಸುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ದೇವಸ್ಥಾನದ ಕಮೀಟಿಯವರು, ನೂತನವಾಗಿ ಆಯ್ಕೆಗೊಂಡ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.