ದೇವಾಲಯ ಜೀರ್ಣೋದ್ಧಾರಕ್ಕೆ 3 ಲಕ್ಷ ವಿತರಣೆ

ಸಂಜೆವಾಣಿ ವಾರ್ತೆ

ಹಿರಿಯೂರು:ಫೆ.5-ಯಲ್ಲದಕೆರೆ ವಲಯದ ಪಿಲಾಲಿ ಕಾರ್ಯಕ್ಷೇತ್ರದ ವೀರವ್ವನಾಗತಿಹಳ್ಳಿ ಗ್ರಾಮದ ಶ್ರೀ ವೀರಾಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ 300000 ಡಿಡಿಯನ್ನು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಕಿಶೋರ್ ಕುಮಾರ್  ಗ್ರಾಮಸ್ಥರ ಸಮ್ಮುಖದಲ್ಲಿ ದೇವಸ್ಥಾನದ ಕಮಿಟಿಯವರಿಗೆ ಹಸ್ತಾಂತರ ಮಾಡಿದರು .ಈ ಸಂದರ್ಭದಲ್ಲಿ ಕೃಷಿ ಮೇಲ್ವಿಚಾರಕರಾದ ಮಲ್ಲಿಕಾರ್ಜುನ್  ಮತ್ತು ಸೇವಾ ಪ್ರತಿನಿಧಿ ತಿಪ್ಪೇಸ್ವಾಮಿ.ವಿ,  ಸಂಘದ ಸದಸ್ಯರು, ಕಮಿಟಿಯ ಪದಾಧಿಕಾರಿಗಳು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು