ದೇವಾಲಯ ನಿರ್ಮಾಣ ಕಾಮಗಾರಿಗೆ ಶೀಘ್ರ ಚಾಲನೆ

ಮಾಲೂರು, ಮಾ. ೧೧: ಚಿಕ್ಕತಿರುಪತಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯವನ್ನು ನೂತನವಾಗಿ ಸುಸಜ್ಜಿತವಾಗಿ ಅಭಿವೃದ್ದಿಪಡಿಸಲು ಮಾಸ್ಟರ್ ಪ್ಲಾನ್ ಮಾಡುವಂತೆ ಸೂಚನೆ ನೀಡಿದ್ದು, ಆದಷ್ಟು ಬೇಗನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮುಜರಾಯಿ ಮತ್ತು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಹೇಳಿದರು.
ಚಿಕ್ಕತಿರುಪತಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದ ಆವರಣದಲ್ಲಿ ರಥ ಸಂಚರಿಸುವ ಬೀದಿ ರಸ್ತೆಯನ್ನು ಸುಮಾರು ೨.೫೦ ಕೋಟಿ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆಯನ್ನಾಗಿ ಅಭಿವೃದ್ದಿಪಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದರು.
ಆಂದ್ರಪ್ರದೇಶದ ದೊಡ್ಡ ತಿರುಪತಿಯ ಹಾಗೆ ಚಿಕ್ಕತಿರುಪತಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯವು ಹೆಚ್ಚು ಪ್ರಸಿದ್ದಿ ಪಡೆದ ದೇವಾಲಯವಾಗಿದೆ. ಪ್ರತಿ ವರ್ಷ ನಡೆಯುವ ಬ್ರಹ್ಮ ರಥೋತ್ಸವ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಾರೆ. ಬ್ರಹ್ಮ ರಥೋತ್ಸವ ಸಂಚರಿಸುವ ರಸ್ತೆಯನ್ನು ಸುಸಜ್ಜಿತವಾಗಿ ಕಾಂಕ್ರಿಟ್ ರಸ್ತೆಯನ್ನಾಗಿ ನಿರ್ಮಿಸುವ ಪ್ರಸ್ತಾಪನೆ ಸಲ್ಲಿಸಿದ್ದರು. ಸುಮಾರು ೨.೫೦ ಕೋಟಿ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆಯನ್ನಾಗಿ ನಿರ್ಮಿಸಲು ಅನುಮೋದನೆ ನೀಡಿ ಭೂಮಿ ಪೂಜೆ ಸಹ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿ ಪೂರ್ಣಗೊಂಡು ರಥ ಸಂಚರಿಸಲು ಅನುಕೂಲವಾಗಲಿದೆ. ದೇವಾಲಯದ ಮುಂಭಾಗದಲ್ಲಿ ಈಗಾಗಲೇ ೧೦೮ ಅಡಿಗಳ ರಾಜಗೋಪುರ ಕಾಮಗಾರಿ ಪೂರ್ಣಗೊಂಡಿದೆ. ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಟಾಟನೆ ಮಾಡಿಸಲಗುವುದು ಎಂದರು.
ಚಿಕ್ಕತಿರುಪತಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯವನ್ನು ನೂತನವಾಗಿ ಸುಸಜ್ಜಿತವಾಗಿ ನಿರ್ಮಿಸಲು ಮಾಸ್ಟರ್ ಪ್ಲಾನ್ ಮಾಡುವಂತೆ ಸೂಚನೆ ನೀಡಿದ್ದು, ಆದಷ್ಟು ಬೇಗನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು. ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಲು ಬರುತ್ತಿರುವುದರಿಂದ ಮುಂದಿನ ೫ ವರ್ಷಗಳಲ್ಲಿ ದೇವಾಲಯದ ಅಭಿವೃದ್ದಿಗೆ ಬೇಕಾಗಿರುವ ಮೂಲಭೂತ ಸೌಕರ್‍ಯಗಳ ಬಗ್ಗೆ ಪಟ್ಟಿ ಮಾಡಬೇಕು. ದೇವಾಲಯದ ಅಭಿವೃದ್ದಿಗೆ ಹಲವರ ಅಭಿಪ್ರಾಯ ಪಡೆಯಲಾಗುವುದು ಎಂದರು.
ಶಾಸಕರಾದ ಕೆ.ವೈ.ನಂಜೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಲಕ್ಷ್ಮೀನಾರಾಯಣ್, ಕೆಪಿಸಿಸಿ ಕಾರ್‍ಯದರ್ಶಿ ಎಂ.ಎಸ್.ಪ್ರದೀಪ್ ರೆಡ್ಡಿ, ತಹಸೀಲ್ಥಾರ್ ಕೆ.ರಮೇಶ್, ತಾಪಂ ಇಒ ವೀಣಾ, ದೇವಾಲಯದ ಕಾರ್‍ಯನಿರ್ವಾಹಣಾಧಿಕಾರಿ ಟಿ.ಸೆಲ್ವಮಣಿ, ಪೇಪ್ಕಾರ್ ಚಲುವಸ್ವಾಮಿ, ಗ್ರಾಪಂ ಅಧ್ಯಕ್ಷ ಟಿ.ಎಂ.ರಾಮ್‌ಪ್ರಸಾದ್, ತಾಪಂ ಮಾಜಿ ಸದಸ್ಯರಾದ ಎಂ.ಎ.ಕೃಷ್ಣಾರೆಡ್ಡಿ (ಕಿಟ್ಟಿ), ಸಂದೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯನರಸಿಂಹ, ಮುಖಂಡರಾದ ವಿ.ನಾಗೇಶ್, ಎಟ್ಟಕೋಡಿ ವೀರಭದ್ರಪ್ಪ, ಗ್ರಾಪಂ ಸದಸ್ಯರಾದ ಜಿ.ವಿ.ಮಂಜುನಾಥ್, ರಾಘವೇಂದ್ರ ಪ್ರಸಾದ್, ನಾರಾಯಣಪ್ಪ, ಎನ್.ಶಂಕರ್ ನಾರಾಯಣಗೌಡ, ಶಶಿಧರ್, ಆಲಂಬಾಡಿ ಬಾಬು, ಅಶ್ವಥ್‌ರೆಡ್ಡಿ, ಕ್ಷೇತ್ರನಹಳ್ಳಿ ವೆಂಕಟೇಶ್ ಗೌಡ, ಎಟ್ಟಕೋಡಿ ವೆಂಕಟೇಶ್, ವಿಜಿ, ರಾಜಶೇಖರ್, ಹರೀಶ್, ಟಿ.ಸಿ.ಮಂಜುನಾಥ್ ಪಿಡಿಒ ಹರೀಂದ್ರಗೋಪಾಲ್ ಇನ್ನಿತರರು ಹಾಜರಿದ್ದರು.