ದೇವಿಪೂರ ಗ್ರಾಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ

ಮಾನ್ವಿ,ಏ.೦೮- ತಾಲೂಕಿನ ತಾಲೂಕಿನ ದೇವಿಪುರ ಗ್ರಾಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಉಪ ಆರೋಗ್ಯ ಶಿಕ್ಷಣಧಿಕಾರಿ ಬುಸ್ಸಯ್ಯ ಮಾತನಾಡಿ ನಮ್ಮ ಆರೋಗ್ಯ ಚನ್ನಾಗಿರಬೇಕೆಂದರೆ ನಾವು ಉತ್ತಮವಾದ ಜೀವನ ಶೈಲಿ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ನಂತರ ಚುನಾವಣೆ ಹಾಗೂ ಮತದಾನದ ಹಕ್ಕನ್ನು ಹಾಗೂ ಅದರ ಮಹತ್ವವನ್ನು ತಿಳಿಸಿದರು.
ನಂತರ ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಇದೆ ನಾವು ಆರೋಗ್ಯಕರ ಜೀವನ ಶೈಲಿಯನ್ನು ರೂಡಿಸಿಕೊಳ್ಳಬೇಕು ಇತ್ತೀಚಿನ ದಿನಗಳಲ್ಲಿ ಸಾಂಕ್ರಾಮಿಕ ಹಾಗೂ. ಅಸಾಂಕ್ರಮಿಕ ಕಾಯಿಲೆಗಳು ಹೆಚ್ಚುತ್ತಿವೆ ನಮ್ಮ ಸುತ್ತಲಿನ ಪರಿಸರವನ್ನೂ ಚೆನ್ನಾಗಿ ಕಾಪಾಡಿಕೊಳ್ಳಬೇಕು ಅಂದಾಗ ಮಾತ್ರ ಸಾಂಕ್ರಾಮಿಕ ಕಾಯಿಲೆ ತಡೆಗಟ್ಟಬಹುದು. ನೈರ್ಮಲ್ಯ ಹಾಗೂ ಸ್ವಚ್ಚತೆ ಕಾಪಾಡುವುದು ಮುಖ್ಯವಾಗಿದೆ ಎಂದರು.
ಮುಂದುವರಿದು ಮುಂಬರುವ ಮೇ ೧೦ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕುಟುಂಬದ ಸದಸ್ಯರು ಕಡ್ಡಾಯವಾಗಿ ಮತದಾನದ ಹಕ್ಕು ಚಲಾಯಿಸಬೇಕು ಪ್ರಜಾಪ್ರಭುತ್ವದಲ್ಲಿ ಪ್ರಜಾಸತ್ತಾತ್ಮಕ ಸಂಪ್ರದಾಯ ಮುಕ್ತ ನ್ಯಾಯ, ಸಮ್ಮತ ಶಾಂತಿಯುತ, ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯಬೇಕು ಪ್ರತಿ ಯೊಂದು. ನಿರ್ಭಯವಾಗಿ ಮತ್ತು ಧರ್ಮ ಜನಾಂಗ ಜಾತಿ ಮತ ಭಾಷೆಯ ಯಾವುದೇ ಪ್ರಭಾವಕ್ಕೆ ಒಳಗಾಗದೆ ತಪ್ಪದೇ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ತಿಳಿಸಿದರು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು, ಯುವಕರು ಸೇರಿದಂತೆ ಅನೇಕರು ಇದ್ದರು.