ದೇವೇಗೌಡರ ಕೊಡುಗೆಯಿಂದ ಜೆಡಿಎಸ್‌ಗೆ ಗೆಲುವು

ದೇವದುರ್ಗ,ಏ.೧೮- ತಾಲೂಕಿಗೆ ಜೆಡಿಎಸ್ ಕೊಡುಗೆ ಅಪಾರವಿದೆ, ರಾಜ್ಯದಲ್ಲಿ ಕುಮಾರಸ್ವಾಮಿಯವರ ಅಭಿವೃದ್ಧಿ ಕಾರ್ಯಗಳೆ ಗೆಲುವಿಗೆ ಶ್ರೀರಕ್ಷಯಾಗಿದೆ ಎಂದು ಜೆಡಿಎಸ್ ಅಭ್ಯರ್ಥಿ ಕರೆಮ್ಮ ಜಿ. ನಾಯಕ ಹೇಳಿದರು.
ಅವರು ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಬಳಿಕ ಸುದ್ಧಿಗಾರರೊಂದಿಗೆ ಮಂಗಳವಾರ ಮಾತನಾಡಿದರು, ನಾಳೆ ಸಿಂಧನೂರು ಶಾಸಕ ವೆಂಟಕರಾವ ನಾಡಗೌಡ, ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ, ರಾಜ್ಯ ಉಪಾಧ್ಯಕ್ಷ ಮಹಾಂತೇಶ ಪಾಟೀಲ್ ಅತ್ತನೂರು, ಜಿಲ್ಲಾಧ್ಯಕ್ಷ ಎಂ. ವಿರುಪಾಕ್ಷಿ, ಸೇರಿದಂತೆ ರಾಜ್ಯ ಮುಖಂಡರ ಸಮ್ಮುಖದಲ್ಲಿ ನಾಮಪತ್ರವನ್ನು ಸಲ್ಲಿಸಲಾಗುವುದು ಹಾಗೂ ಪಟ್ಟಣದ ಟಿಎಪಿಎಂಸಿ ಆವರಣದಲ್ಲಿ ಬಹಿರಂಗ ಸಭೆಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ತಾಲೂಕಿನಾದ್ಯಂತ ಜೆಡಿಎಸ್ ಪರವಾದ ವಾತವರಣ ಇದ್ದು, ಅಭೂತಪೂರ್ವ ಬೆಂಬಲ ವ್ಯಕ್ತವಾಗತ್ತಿದೆ, ಹಲವಾರು ಹಿರಿಯ ಮುಖಂಡರು ಜೆಡಿಎಸ್ ಪಕ್ಷವನ್ನು ಸೇರಿದ್ದಾರೆ. ಮತ್ತೊಮ್ಮೆ ರಾಜ್ಯದಲ್ಲಿ ಕುಮಾರಣ್ಣ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದರು. ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆರ್ ಶ್ರೀದೇವಿ ನಾಯಕ ಬಿಜೆಪಿ ಕಾಂಗ್ರೇಸ್ ನೇರ ಸ್ಪರ್ಧೆಯಿದ್ದು ಜೆಡಿಎಸ್ ಆಟಕುಂಟು ಲೆಕ್ಕಕಿಲ್ಲ ಎಂದು ಹೇಳಿರುವುದು ಹಾಸ್ಯಾಸ್ಪದವಾಗಿದ್ದು, ಈ ಬಾರಿ ಎರಡು ರಾಷ್ಟ್ರೀಯ ಪಕ್ಷಗಳಿಗೆ ಜನರು ಪಾಠ ಕಲಿಸಲಿದ್ದಾರೆ. ತಾಲೂಕಿನ ಮಹಿಳಾ ಮತದಾರರು ಜೆಡಿಎಸ್ ಪರವಾಗಿ ಮತ ಚಲಾಯಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಬುಡ್ಡನಗೌಡ ಪಾಟೀಲ್, ಜಿಲ್ಲಾ ಉಪಾಧ್ಯಕ್ಷ ಅಮರೇಶ ಪಾಟೀಲ್, ಸಿದ್ದಯ್ಯ ಸ್ವಾಮಿ ಮಸರಕಲ್, ಶಾಲಂ ಉದ್ದಾರ, ಶರಣಪ್ಪ ಬಳೆ ಸೇರಿದಂತೆ ಇತರರು ಇದ್ದರು.