ದೇಶಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆ ಅಪಾರ:ಯತ್ನಾಳ

ಸಂಜೆವಾಣಿ ವಾರ್ತೆ,
ವಿಜಯಪುರ,ಏ.15:ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಭಾನುವಾರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಅನಂತರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಾತನಾಡಿ, ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ ಮಹಾನ್ ನಾಯಕ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಜಗತ್ತಿಗೆ ಮಾದರಿ ಸಂವಿಧಾನ ನೀಡಿದ್ದಾರೆ. ಅವರು ದೇಶಕ್ಕೆ ನೀಡಿರುವ ಕೊಡುವೆ ಅಪಾರವಾದದ್ದು. ಆ ಕೊಡುಗೆಗಳನ್ನು ಸ್ಮರಿಸುವ ಹಾಗೂ ಅವರ ಉದ್ದೇಶಗಳನ್ನು ಈಡೇರಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿ ಪ್ರಾಮಾಣಿಕವಾಗಿ ಮಾಡಿದೆ. ಎಲ್ಲಾ ಸಮುದಾಯಗಳಿಗೂ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ರಾಜಶೇಖರ ಕುರಿಯವರ, ಕುಮಾರ ಗಡಗಿ, ವಿಠ್ಠಲ ಹೊಸಪೇಟೆ, ಜವಾಹರ ಗೋಸಾವಿ, ಕಿರಣ ಪಾಟೀಲ, ವಿಜಯಪುರ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಎಸ್.ಸಿ ಮೋರ್ಚಾ ಅಧ್ಯಕ್ಷ ಪ್ರಕಾಶ ಚವ್ಹಾಣ, ರೈತ ಮೋರ್ಚಾ ಅಧ್ಯಕ್ಷ ರಾಚು ಬಿರಾದಾರ, ಮುಖಂಡರಾದ ಪಾಂಡುಸಾಹುಕಾರ ದೊಡಮನಿ, ಮಹೇಶ ಒಡೆಯರ, ವಿಕ್ರಮ ಗಾಯಕವಾಡ, ಲಕ್ಷ್ಮಣ ಜಾಧವ, ಮಡಿವಾಳ ಯಾಳವಾರ, ಚಂದ್ರು ಚೌಧರಿ, ಉಮೇಶ ವೀರಕರ, ವಿಠ್ಠಲ ನಡುವಿನಕೇರಿ, ಸತೋಷ ತಳಕೇರಿ, ಮನೋಹರ ಕಾಂಬಳೆ, ವಿರೇಶ ವಾಲಿಕಾರ ಸೇರಿದಂತೆ ಇತರ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.