ದೇಶದಲ್ಲಿ ಸಗಟು ಹಣದುಬ್ಬರ ಪ್ರಮಾಣ ಏರಿಕೆ

ನವದೆಹಲಿ, ನ.15- ದೇಶದಲ್ಲಿ ಅಕ್ಟೋಬರ್ ತಿಂಗಳಲ್ಲಿ ಸಗಟು ದರ ಸೂಚ್ಯಂಕ ಹಣದುಬ್ಬರ ಪ್ರಮಾಣ 10.66 ರಿಂದ ಶೇ.12.54 ಕ್ಕೆ ಏರಿಕೆಯಾಗಿದೆ.

ಕುರಿತು ಮಾಹಿತಿ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ ಸೆಪ್ಟೆಂಬರ್ ತಿಂಗಳಲ್ಲಿ ಇದ್ದ ಸಗಟು ದರದ ಪ್ರಮಾಣಕ್ಕಿಂತ ಅಕ್ಟೋಬರ್ ತಿಂಗಳಲ್ಲಿ ಹೆಚ್ಚಾಗಿದೆ ಎಂದು ಹೇಳಿದೆ.

ಆಗಸ್ಟ್ ತಿಂಗಳಲ್ಲಿ ಈ ಪ್ರಮಾಣ 11.6 4ರಷ್ಟು ಇತ್ತು .ಇದು ತಿಂಗಳಿಂದ ತಿಂಗಳಿಗೆ ಏರಿಳಿತವಾಗುತ್ತಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಮೂಲಗಳು ತಿಳಿಸಿವೆ.

ದೇಶದಲ್ಲಿ ಸಗಟು ಹಣದುಬ್ಬರ ಪ್ರಮಾಣ 12.54 ಅಕ್ಟೋಬರ್ ತಿಂಗಳಲ್ಲಿ ಏರಿಕೆಯಾಗಿದೆ. ಕಳೆದ ವರ್ಷ ಇದೇ ತಿಂಗಳಿಗೆ ಹೋಲಿಸಿದರೆ ಶೇಕಡ 1.31 ರಷ್ಟು ಹೆಚ್ಚಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಎಣ್ಣೆ ಆಹಾರಪದಾರ್ಥ ಕಚ್ಚಾತೈಲ ನೈಸರ್ಗಿಕ ಅನಿಲ ರಾಸಾಯನಿಕ ಮತ್ತು ರಸಗೊಬ್ಬರ ಉತ್ಪನ್ನ ಸೇರಿದಂತೆ ವಿವಿಧ ಉತ್ಪನ್ನಗಳ ದರ ಏರಿಕೆಯಿಂದಾಗಿ ಸಗಟು ಸೂಚ್ಯಂಕ ಹಣದುಬ್ಬರ ಪ್ರಮಾಣ ಹೆಚ್ಚಾಗಿದೆ ಎಂದು ತಿಳಿಸಲಾಗಿದೆ.

ಕಳೆದ ತಿಂಗಳಿಗಿಂತ ಅಕ್ಟೋಬರ್ ತಿಂಗಳಲ್ಲಿ ಸಗಟು ಹಣದುಬ್ಬರ ಪ್ರಮಾಣ ಮೆಚ್ಚುಗೆಯಾಗಿದೆ ಇದರಿಂದಾಗಿ ಬೆಲೆ ಏರಿಕೆ ಹೆಚ್ಚಾಗಿ ಜನರ ಮೇಲೆ ಬೀಳುವಂತಾಗಿದೆ.