ದೇಶದಲ್ಲಿ ಸೋಂಕು ಏರಿಳಿತ

ನವದೆಹಲಿ,ಏ.೧೦- ದೇಶದಲ್ಲಿ ದಿನ ನಿತ್ಯ ಕೊರೊನಾ ಸೋಂಕು ಸಂಖ್ಯೆಯಲ್ಲಿ ಏರಿಳಿತ ಕಾಣುತ್ತಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆತಂಕ ಹೆಚ್ಚುವಂತೆ ಮಾಡಿದೆ.

ದೇಶದಲ್ಲಿ ನಿನ್ನೆ ದಾಖಲಾಗಿದ್ದ ಸೋಂಕಿಗಿಂತ ಇಂದು ಶೇ.೧೦ಕ್ಕೂ ಹೆಚ್ಚು ಕಾಣಿಸಿಕೊಂಡಿದೆ..ಕಳೆದ ೨೪ ಗಂಟೆಯ ಅವಧಿಗಳಲ್ಲಿ ೫,೮೮೦ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೇ ವೇಳೆ ೩,೭೨೬ ಮಂದಿ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ಎಂದು ಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ನಿನ್ನೆ ಕಾಣಿಸಿಕೊಂಡ ಸೋಂಕಿಗಿಂತ ಇಂದು ತುಸು ಏರಿಕೆಯಾಗಿದ್ದು ಆತಂಕ ಮೂಡಿಸಿದೆ.ಸೋಂಕು ನಿತ್ಯ ಏರಿಳಿತವಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೩೫,೧೯೯ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಸೋಂಕಿನಿಂದ ಹೊಸದಾಗಿ ೩ಸಾವಿರಕ್ಕೂ ಮಂದಿ ಚೇತರಿಸಿಕೊಂಡಿದ್ದು ಚೇತರಿಕೆಯ ಒಟ್ಟು ಸಂಖ್ಯೆ ೪,೪೧,೯೬,,೩೧೮ ಕ್ಕೆ ಏರಿಕೆಯಾಗಿದೆ. ಜೊತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.೦.೭ ಕ್ಕೆ ಹೆಚ್ಚಳವಾಗಿದೆ. ಸೋಂಕಿನಿಂದ ಇಲ್ಲಿಯ ತನಕ ೫,೩೦,೯,೭೯ ಮಂದಿ ಸಾವನ್ನಪ್ಪಿದ್ದು ಸಾವಿನ ಪ್ರತಿಶತ ಪ್ರಮಾಣ ಶೇ.೧.೧೯ ರಷ್ಟು ಇದೆ. ಎಂದು ಹೇಳಿದೆ.

ದೇಶದಲ್ಲಿ ಹೊಸದಾಗಿ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಪ್ರಮಾಣ ಶೇ.೯೮.೭೪ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಕೊರೊನಾ ಸೋಂಕಿನ ದಿನದ ಪಾಸಿಟಿವಿ ಪ್ರಮಾಣ ಶೇ. ೭ರಷ್ಟು ಇದ್ದು ದಿನದ ಪಾಸಿಟಿವಿಟಿ ಪ್ರಮಾಣ ಶೇ
೩.೩೯ ರಷ್ಟು ಇದ್ದು ವಾರದ ಸರಾಸರಿ ಪ್ರಮಾಣ ,ಶೇ.೩.೫೪ ರಷ್ಟು ಇದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧ ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದ್ದು ಇಲ್ಲಿಯ ತನಕ ೯೨.೨೭ ಕೋಟಿ ಜನರಿಗೆ ಪರೀಕ್ಷೆ ಮಾಡಲಾಗಿದೆ. ಇದುವರೆಗೆ ೨೨೦.೬೬ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.