ದೇಶದಲ್ಲಿ ಸೋಂಕು ಮತ್ತಷ್ಟು ಹೆಚ್ಚಳ

ನವದೆಹಲಿ,ಜ.೧೫- ದೇಶದಲ್ಲಿ ದಿನದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ನೆನ್ನೆಗಿಂತ ಇಂದು ಮತ್ತಷ್ಟು ಏರಿಕೆಯಾಗಿರುವುದು ಆತಂಕ ಮೂಡಿಸಿದೆ.
ಇಂದೂ ಕೂಡ ೨.೬೮ ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.ಜೊತೆಗೆ ೧,೨೨,೬೮೪ ಮಂದಿ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದಿನನಿತ್ಯ ಸೋಂಕು ಹೆಚ್ಚುತ್ತಿರುವ ಪರಿಗೆ ದಿನದ ಪಾಸಿಟಿವಿಟಿ ಪ್ರಮಾಣ ಶೇಕಡ ೧೬.೧೬ಆರೋಗ್ಯ ಏರಿಕೆಯಾಗಿದೆ. ಜೊತೆಗೆ ಸೋಂಕಿನ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇಕಡಾ ೩.೮೫ ರಷ್ಟು ಇದೆ . ಸೋಂಕಿನ ವಾರದ ಸರಾಸರಿ ಪ್ರಮಾಣ ಶೇಖರ ೧೨.೮೪ ರಷ್ಟು ಎಂದು ತಿಳಿಸಲಾಗಿದೆ.
ದೇಶದಲ್ಲಿ ಹೊಸದಾಗಿ ಚೇತರಿಸಿಕೊಂಡು ಬಿಡುಗಡೆಯಾಗಿರುವ ಸೋಂಕಿತರ ಸಂಖ್ಯೆ ಸೇರಿದಂತೆ ಇಲ್ಲಿತನಕ ಗುಣಮುಖರಾದವರ ಸಂಖ್ಯೆ ೩,೪೯,೪೭,೩೯೦ ಕ್ಕೆ ಏರಿಕೆಯಾಗಿದೆ.

೧೪.೧೭ ಲಕ್ಷಕ್ಕೇರಿದ ಸಕ್ರಿಯ ಪ್ರಕರಣ:

ದೇಶದಲ್ಲಿ ಲಕ್ಷ ಲಕ್ಷ ಸಂಖ್ಯೆಯಲ್ಲಿ ಕೊರೊನಾ ಸೋಂಕು ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ರಾಜ್ಯದಲ್ಲಿ ಹೆಚ್ಚಾಗಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ ೧೪,೧೭,೮೨೦ ಮಂದಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕುಸಿದ ಚೇತರಿಕೆ:

ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚೇತರಿಕೆ ಪ್ರಮಾಣ ಗಣನೀಯವಾಗಿ ಕುಸಿತ ಕಂಡಿದೆ. ಸದ್ಯ ಈ ಪ್ರಮಾಣ ಶೇ. ೯೪.೮೩ ರಷ್ಟು ಇದೆ ಇಂದು ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಇದುವರೆಗೂ ೧೫೬.೦೨ ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಜೊತೆಗೆ ೭೦.೦೭ ಕೋಟಿ ಜನರಿಗೆ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ

೬ ಸಾವಿರ ದಾಟಿದ ಓಮಿಕ್ರಾನ್

ದೇಶದಲ್ಲಿ ಓಮಿಕ್ರಾನ್ ಸೋಂಕು ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವುದು ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಆತಂಕಕ್ಕೆ ಸಿಲುಕುವಂತೆ ಮಾಡಿದೆ.
ನಿನ್ನೆಗಿಂತ ಇಂದು ಶೇಕಡಾ ೫ಕ್ಕೂ ಹೆಚ್ಚು ಮಂದಿಯಲ್ಲಿ ರೂಪಾಂತರಿ ಸೋಂಕು ಕಾಣಿಸಿಕೊಂಡಿದೆ ಇದರೊಂದಿಗೆ ದೇಶದಲ್ಲಿ ರೂಪಾಂತರಿ ಸೋಂಕು ಸಂಖ್ಯೆ ೬,೦೪೧ ಕ್ಕೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.