ದೇಶದಲ್ಲಿ ಸೋಂಕು ಹೆಚ್ಚಳದ ಭೀತಿ

ನವದೆಹಲಿ, ಏ. ೨- ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಹಲವು ತಿಂಗಳ ನಂತರ ದಾಖಲೆ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದು ದೇಶದಲ್ಲಿ ಸೋಂಕು ಹೆಚ್ಚಾಗುವ ಮುನ್ಸೂಚನೆ ನೀಡಿದೆ.ನಿನ್ನೆ ಕಳೆದ ೨೦೯೫ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು ಕಳೆದ ೨೪ ಗಂಟೆಗಳಲ್ಲಿ ಹೊಸದಾಗಿ ೩,೮೨೪ ಮಂದಿಯಲ್ಲಿ ಹೊಸ ಕೋವಿಡ್ ಸೋಂಕು ಕಾಣಿಸಕೊಂಡಿದೆ. ದಿನದಿಂದ ದಿನಕ್ಕೆ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆತಂಕ ಹೆಚ್ಚುವಂತೆ ಮಾಡಿದೆ.
ನಿನ್ನೆ ದಾಖಲಾಗಿದ್ದ ಸೋಂಕಿಗಿಂತ ಇಂದು ಶೇ.೨೮ ರಷ್ಟು ಸೋಂಕು ಹೆಚ್ಚಳವಾಗಿದ್ದು ನಾಲ್ಕು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.ಸೋಂಕಿನಿಂದ ೧೭೮೪ ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಹೊಸದಾಗಿ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೧೮,೩೮೯ ಕ್ಕೆ ಏರಿಕೆಯಾಗಿದ್ದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ ಎಂದು ತಿಳಿಸಿದೆ
ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸಂಖ್ಯೆ ಸೇರಿದಂತೆ ಇಲ್ಲಿಯ ತನಕ ಒಟ್ಟು ಸೋಂಕಿತರ ಸಂಖ್ಯೆ ,೪,೪೧,೭೩,೩೩೫ ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಗಳ ಸಂಖ್ಯೆ ಶೇ.೦.೪ ರಷ್ಟು ಇದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಹೊಸದಾಗಿ ಸೋಂಕಿನಿಂದ ಮೃತಪಟ್ಡಿರುವರೂ ಸೇರಿದಂತೆ ಇಲ್ಲಿಯ ತನಕ ೫,೩೦,೮೮೧ ಮಂದಿಗೆ ಏರಿಕೆಯಾಗಿದೆ. ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಪ್ರಮಾಣ ಶೇ.೯೮.೭೭ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.ಕೊರೊನಾ ಸೋಂಕಿನ ದಿನದ ಪಾಸಿಟಿವಿ ಪ್ರಮಾಣ ಶೇ. ೨.೮೭ ರಷ್ಟು ಇದ್ದು ವಾರದ ಸರಾಸರಿ ಪ್ರಮಾಣ ,ಶೇ.೨.೨೪ ರಷ್ಟು ಇದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.ಹೊಸದಾಗಿ ೧,೩೩,೧೫೩ ಮಂದಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದ್ದು ಇಲ್ಲಿಯ ತನಕ ೯೨.೧೮ ಕೋಟಿ ಜನರಿಗೆ ಪರೀಕ್ಷೆ ಮಾಡಲಾಗಿದೆ ಎಂದು ತಿಳಿಸಿದರು.ಕಳೆದ ೨೪ ಗಂಟೆಗಳ ಅವಧಿಗಕ್ಲಿ ೨೭೯೯ ಡೋಸ್ ಲಸಿಕೆ ಹಾಕಲಾಗಿದ್ದು ಇಲ್ಲಿಯ ತನಕ ದೇಶದಲ್ಲಿ ಇದುವರೆಗೆ ೨೨೦.೬೬ ಕೋಟಿ ಡೋಸ್ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.