ದೇಶದಲ್ಲಿ ಸೋಂಕು ಹೆಚ್ಚಳ: 291 ಮಂದಿ ಸಾವು

ನವದೆಹಲಿ,ಮಾ.೨೯- ದೇಶದಲ್ಲಿ ಕೊರೊನೊ ಸೋಂಕಿನ ಎರಡನೇ ಅಲೆ ವೇಗ ಪಡೆದುಕೊಂಡಿದೆ. ಇದರಿಂದಾಗಿ ದಿನದಿಂದ ದಿನಕ್ಕೆ ದೇಶದಲ್ಲಿ ದಾಖಲೆಯ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ.
ಸೋಂಕು ಏರಿಕೆ ಮಾತ್ರವಲ್ಲ, ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಅದಲ್ಲದೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಐದು ಲಕ್ಷ ದಾಟಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಮತ್ತಷ್ಟು ಆತಂಕಕ್ಕೆ ಸಿಲುಕುವಂತೆ ಮಾಡಿದೆ.
ಕಳೆದ ೨೪ ಗಂಟೆಗಳಲ್ಲಿ ದೇಶದಲ್ಲಿ ೬೮,೦೨೦ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.೨೯೧ ಮಂದಿ ಮೃತಪಟ್ಟಿದ್ದು ಸೋಂಕಿನಿಂದ ೩೨,೨೩೧ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ನಿತ್ಯ ದಾಖಲಾಗುತ್ತಿರುವ ಕೊರೊನೊ ಸೋಂಕು ಸಂಖ್ಯೆಯ ಪೈಕಿ ಮಹಾರಾಷ್ಟ್ರ ಒಂದರಲ್ಲೇ ೪೦ ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ಕಾಣಿಸಿಕೊಂಡಿರುವುದು ಮಹಾರಾಷ್ಟ್ರದಲ್ಲಿ ಸೋಂಕಿನ ಮತ್ತಷ್ಟು ಹೆಚ್ಚಾಗಿರುವುದಕ್ಕೆ ನಿದರ್ಶನವಾಗಿದೆ.
ಇಂದು ಬೆಳಗ್ಗೆ ೮ ಗಂಟೆಯ ತನಕ ಧೃಢ ಪಟ್ಟಿರುವ ಹೊಸ ಪ್ರಕರಣಗಳು ಸೇರಿದಂತೆ ಈವರೆಗೆ ೧,೨೦,೩೯,೬೪೪ ಮಂದಿಗೆ ಏರಿಕೆಯಾಗಿದೆ.ಸೋಂಕಿನಿಂದ ೧,೧೩,೫೫,೯೯೩ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ ೧,೬೧,೮೪೩ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೊರೊನಾ ಪ್ರಮಾಣ ನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಲಸಿಕೆ ನೀಡುವ ಪ್ರಮಾಣವನ್ನು ಮತ್ತಷ್ಟು ಹೆಚ್ಚು ಮಾಡುವ ಜೊತೆಗೆ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸುವಂತೆ ನೋಡಿಕೊಳ್ಳುವುದು ಅಗತ್ಯ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ
ಸಕ್ರಿಯ ಪ್ರಕರಣ ಏರಿಕೆ:
ಮಹಾರಾಷ್ಟ್ರ ಕರ್ನಾಟಕ ತಮಿಳುನಾಡು, ಕೇರಳ, ಪಂಜಾಬ್ ಹರಿಯಾಣ, ಪಶ್ಚಿಮ ಬಂಗಾಳ ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿರುವ ಪ್ರಮಾಣ ನಿತ್ಯ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ.
ಸದ್ಯ ದೇಶದಲ್ಲಿ ೫,೨೧,೮೦೮ ಮಂದಿಗೆ ಸೋಂಕು ಏರಿಕೆಯಾಗಿದೆ ಕಳೆದ ಒಂದೂವರೆ ತಿಂಗಳಲ್ಲಿ ೪ಲಕ್ಷಕ್ಕೂ ಅಧಿಕ ಮಂದಿಗೆ ಸಕ್ರಿಯ ಪ್ರಕರಣ ಕಾಣಿಸಿಕೊಂಡಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಬೆಚ್ಚಿಬೀಳಿಸುವಂತೆ ಮಾಡಿದೆ

೬ ಕೋಟಿ ಮಂದಿಗೆ ಲಸಿಕೆ
ದೇಶದಲ್ಲಿ ನಿತ್ಯ ದಾಖಲೆ ಪ್ರಮಾಣದಲ್ಲಿ ಕೊರೋನಾ ಸೋಂಕು ಸಂಖ್ಯೆ ದಾಖಲೆಏರಿಕೆಯಾಗುತ್ತಿದೆ ಇದರ ನಡುವೆ ಲಸಿಕೆ ಹಾಕುವ ಸಂಖ್ಯೆಯನ್ನು ಹೆಚ್ಚು ಮಾಡಲಾಗಿದೆ.
ಸದ್ಯ ದೇಶದಲ್ಲಿ ಇದುವರೆಗೆ ೬,೦೫,೩೦,೪೩೫ ಮಂದಿಗೆ ಲಸಿಕೆ ಹಾಕಲಾಗಿದೆ. ದೇಶದಲ್ಲಿ ರೀತ್ಯಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಲಸಕ್ಕೆ ನೀಡಿಕೆ ಪ್ರಮಾಣವನ್ನು ಮತ್ತಷ್ಟು ಹೆಚ್ಚು ಮಾಡುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ

೧೫ ರಾಜ್ಯಗಳಲ್ಲಿ ಹೆಚ್ಚಳ
ದೇಶದ ೧೫ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕರೆಯನ್ನು ಸೋಂಕು ಪ್ರಮಾಣ ನಿತ್ಯ ಏರಿಕೆಯಾಗುತ್ತಿದೆ
ದೇಶದಲ್ಲಿ ಇಂದು ೮ ಗಂಟೆಯವರೆಗೆ ದಾಖಲಾಗಿರುವ ೬೮೦೦೦ ಅಧಿಕ ಮಂದಿ ಸೋಂಕಿತರ ಪೈಕಿ ಮಹಾರಾಷ್ಟ್ರದಲ್ಲಿ ೪೦,೪೧೪ ಮಂದಿಗೆ ಸೋಂಕು ಕಾಣಿಸಿಕೊಂಡು ದಾಖಲೆ ಬರೆದಿದೆ
ಕರ್ನಾಟಕ ರಾಜಸ್ಥಾನ ಉತ್ತರ ಪ್ರದೇಶ ಮಧ್ಯಪ್ರದೇಶ ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋಂಕು ಪ್ರಮಾಣ ಗಣನೀಯವಾಗಿ ಹೆಚ್ಚಾಗುತ್ತಿದೆ