ದೇಶದಲ್ಲಿ ಸೋಂಕು ಹೆಚ್ಚಳ

ನವದೆಹಲಿ,ಡಿ.೩- ದೇಶದಲ್ಲಿ ಕೊರೋನೋ ಸೋಂಕಿನ ಹೊಸ ರೂಪಾಂತರಿ ಒಮಿಕ್ರಾನ್ ಪತ್ತೆಯಾಗಿ ಭಯದ ವಾತಾವರಣ ಸೃಷ್ಟಿ ಮಾಡಿರುವ ನಡುವೆಯೇ ಕೊರೊನಾ ಸೋಂಕು ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ.

ದೇಶದಲ್ಲಿ ನೆನ್ನೆ ದಾಖಲಾಗಿದ್ದ ಸೋಂಕು ಸಂಖ್ಯೆಗಿಂತ ಇಂದು ಶೇಕಡ ೫.೬ ರಷ್ಟು ಹೆಚ್ಚಾಗಿದೆ ಇದರಿಂದಾಗಿ ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳಲ್ಲಿ ಮತ್ತೆ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕಳೆದ ೨೪ ಗಂಟೆಗಳ ಅವಧಿಯಲ್ಲಿ ಹೊಸದಾಗಿ ೯,೨೧೬ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ೮,೬೧೨ ಮಂದಿ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.

ಇಂದು ಬೆಳಗ್ಗೆ ೮ ಗಂಟೆ ತನಕ ಹೊಸದಾಗಿ ಕಾಣಿಸಿಕೊಂಡಿರುವ ಹೊಸ ಸೋಂಕು ಸಂಖ್ಯೆ ಸೇರಿದಂತೆ ಇಲ್ಲಿತನಕ ಒಟ್ಟಾರೆ ಸೋಂಕು ಸಂಖ್ಯೆ೩,೪೬,೦೬,೫೪೧ಕ್ಕೆ ಏರಿಕೆಯಾಗಿದೆ. ಜೊತೆಗೆ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾದವರ ಒಟ್ಟು ಸಂಖ್ಯೆ ೩,೪೦,೪೫,೬೬೬ಕ್ಕೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಏರಿಳಿತ ವಾಗುತ್ತಿರುವ ನಡುವೆ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಹೆಚ್ಚು ಕಡಿಮೆಯಾಗುತ್ತದೆ.

ಸದ್ಯ ದೇಶದಲ್ಲಿ ೯೯,೯೭೬ ಮಂದಿಯಲ್ಲಿ ಸಕ್ರಿಯ ಪ್ರಕರಣ ಇದೆ ದೇಶದ ಒಟ್ಟು ಸೋಂಕಿತರ ಬಗ್ಗೆ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.೦.೨೯ ರಷ್ಟು ಇದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಕೊರೋನಾ ಸೋಂಕಿನ ದಿನದ ಪಾಸಿಟಿವಿಟಿ ಪ್ರಮಾಣ ಶೇಕಡ ೦.೮೦ ರಷ್ಟು ಇದ್ದು ವಾರದ ಸರಾಸರಿ ಪ್ರಮಾಣ ಶೇ.೦.೮೪ ರಷ್ಡು ಇದೆ.

ದೇಶದಲ್ಲಿ ಇರುವರೆಗೂ ೧೨೫.೭೫ ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು ಇಲ್ಲಿಯತನಕ ೬೪.೪೬ ಕೋಟಿ ಜನರಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ

ಚೇತರಿಕೆ ಏರಿಕೆ

ದೇಶದಲ್ಲಿ ದಿನದಿಂದ ದಿನಕ್ಕೆ ಕೋರುವನು ಸೋಂಕು ಸಂಖ್ಯೆ ಏರಿಳಿತ ವಾಗುತ್ತಿರುವ ನಡುವೆ ಚೇತರಿಕೆ ಪ್ರಮಾಣ ಇಳಿಕೆಯಾಗಿದೆ.

ದೇಶದಲ್ಲಿ ಸದ್ಯ ಈ ಪ್ರಮಾಣ. ಶೇ ೯೮.೩೫ ರಷ್ಟು ಇದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ .