ದೇಶದಲ್ಲಿ 5 ಮಂದಿಗೆ ಒಮಿಕ್ರಾನ್

ನವದೆಹಲಿ,ಡಿ.೫- ದಕ್ಷಿಣ ಆಫ್ರಿಕಾ ಸೇರಿದಂತೆ ವಿವಿಧ ದೇಶಗಳಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಕೊರೊನಾ ಸೋಂಕಿನ ಹೊಸ ರೂಪಾಂತರಿ ಒಮಿಕ್ರಾನ್ ಕರ್ನಾಟದಲ್ಲಿ ಆರಂಭಗೊಂದು ದಿನೇದಿನೇ ದೇಶದ ಒಂದೊಂದೇ ರಾಜ್ಯಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಭೀತಿ ಉಂಟು ಮಾಡಿದೆ.
ಕರ್ನಾಟಕದಲ್ಲಿ ೨ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟ ನಡುವೆಯೇ ಗುಜರಾತ್ ಮತ್ತು ಮಹಾರಾಷ್ಟ್ರ ದಲ್ಲಿ ತಲಾ ಒಂದು ಹೊಸ ಮಾದರಿಯ ಸೋಂಕು ಕಾಣಿಸಿಕೊಂಡಿತ್ತು ಇದೀಗ ೫ ನೇ ಒಮಿಕ್ರಾನ್ ಸೋಂಕು ದೆಹಲಿಯಲ್ಲಿ ಕಾಣಿಸಿಕೊಂಡಿದೆ.
ತಾಂಜೇನಿಯ ದಿಂದ ದೆಹಲಿಗೆ ಆಗಮಿಸಿದ ವ್ಯಕ್ತಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. ಸದ್ಯ ದೆಹಲಿಯ ಲೋಕನಾಯಕ ಜಯಪ್ರಕಾಶ ಆಸ್ಪತ್ರೆಯಲ್ಲಿ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನವಂಬರ್ ೨೫ ರಂದು ದಕ್ಷಿಣ ಆಫ್ರಿಕಾದಲ್ಲಿ ಮೊದಲಬಾರಿಗೆ ಒಮಿಕ್ರಾನ್ ಸೋಂಕು ಕಾಣಿಸಿಕೊಂಡಿತ್ತು. ಅದಾದ ನಂತರ ಜಗತ್ತಿನ ವಿವಿಧ ದೇಶಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಲೇ ಭಾರತಕ್ಕೂ ಕಾಲಿಟ್ಟಿದೆ.
ಹೊಸ ಮಾದರಿಯ ಕೊರೊನಾ ಸೋಂಕು ತಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆತಂಕಕ್ಕೆ ಒಳಗಾಗಿರುವ ವಿಶ್ವ ಆರೋಗ್ಯ ಸಂಸ್ಥೆ ಎಲ್ಲ ದೇಶಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಬಂದ್ ಗೆ ಮನವಿ:
ದೆಹಲಿಯಲ್ಲಿ ಹೊಸ ಮಾದರಿಯ ಕೊರೊನಾ ರೂಪಾಂತರಿ ತಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಭಾರತಕ್ಕೆ ಬರುವುದನ್ನು ನಿರ್ಬಂಧ ಇರುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಈಗಾಗಲೇ ಐದು ಪ್ರಕರಣಗಳು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪತ್ತೆಯಾಗಿವೆ ಮಂದಿಯಲ್ಲಿ ಶಂಕಿತ ಪ್ರಕರಣಗಳು ಇವೆ ಅವುಗಳ ಪಟ್ಟರೆ ಮತ್ತಷ್ಟು ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ. ಈ ಎಲ್ಲಾ ಬೆಳವಣಿಗೆಯಲ್ಲ ಮುಂದಿಟ್ಟುಕೊಂಡು ಕೂಡಲೇ ಅಂತರಾಷ್ಟ್ರೀಯ ವಿಮಾನ ಸಂಚಾರ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ

ಲಸಿಕೆ ಹೆಚ್ಚಳಕ್ಕೆ ಸೂಚನೆ

ಭಾರತ ಸೇರಿದಂತೆ ಜಗತ್ತಿನ ವಿವಿಧ ಭಾಗಗಳಲ್ಲಿ ಹೊಸ ಮಾದರಿಯ ರೂಪಾಂತರಿ ಒಮಿಕ್ರಾನ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಳ ಮಾಡುವಂತೆ ಜೊತೆಗೆ ಆರೋಗ್ಯ ಮೂಲಸೌಕರ್ಯಗಳನ್ನು ಸಿದ್ಧಪಡಿಸಿ ಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆಯ ದೇಶಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಹೊಸ ಮಾದರಿಯ ತಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇದನ್ನು ಎದುರಿಸಲು ಎಲ್ಲಾ ದೇಶಗಳು ಎದುರಿಸಲು ಸಜ್ಜಾಗುವಂತೆಯೂ ಹೇಳಿಕೆಯಲ್ಲಿ ತಿಳಿಸಿದೆ