ದೇಶದಾದ್ಯಂತ ಲಸಿಕೆ ಮೇಕ್ ಶಿಫ್ಟ್ ಆಸ್ಪತ್ರೆಗೆ ಅಮೆರಿಕ ಸಲಹೆ


ವಾಷಿಂಗ್ಟನ್,ಮೇ.೪- ಭಾರತದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅಮೆರಿಕ, ದೇಶಾದ್ಯಂತ ಲಾಕ್ ಡೌನ್, ಲಸಿಕೆ ಹಾಕುವುದು ಮತ್ತು ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣಕ್ಕೆ ಒತ್ತು ನೀಡುವಂತೆ ಸಲಹೆ ನೀಡಿದೆ.
ಸೇನಾಪಡೆಗಳ ಸಹಾಯ ಪಡೆದು ಶ್ರೀಘ್ರದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆಗಳನ್ನು ನಿರ್ಮಾಣ ಮಾಡಿ ಸೋಂಕಿತರಿಗೆ ಚಿಕಿತ್ಸೆ ನೀಡುವಂತೆ ಅಮೆರಿಕದ ಶ್ವೇತ ಮುಖ್ಯ ವೈದ್ಯಾಧಿಕಾರಿ ಡಾಕ್ಟರ್ ಅಂತೋನಿ ಫಾಸಿ ಹೇಳಿದ್ದಾರೆ.
ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿ ಮಾಡಬೇಕು,ಲಸಿಕಾ ಅಭಿಯಾನವನ್ನು ಮತ್ತಷ್ಟು ಹೆಚ್ಚು ಮಾಡಬೇಕು ಅಗತ್ಯವಿರುವ ಕಡೆಗಳಲ್ಲೆಲ್ಲ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ ಮಾಡುವ ಕಡೆಗೆ ಕೇಂದ್ರ ಸರ್ಕಾರವನ್ನು ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.
ವಿಶ್ವದ ಪ್ರಮುಖ ಸೋಂಕು ಶಾಸ್ತ್ರಜ್ಞರು ಆಗಿರುವ ಡಾ.ಫಾಸಿ ಅವರು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸೋಂಕು ತಡೆಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ
ಈಗಾಗಲೇ ಭಾರತದಲ್ಲಿ ಅಸಂಖ್ಯಾತ ಮಂದಿ ಸೋಂಕಿಗೆ ಒಳಗಾಗಿದ್ದಾರೆ ಜೊತೆಗೆ ಎಲ್ಲರಿಗೂ ವೈದ್ಯಕೀಯ ಸೌಲಭ್ಯ ಕೊಡಲು ಸಾಧ್ಯವಾಗದೆ ಪರದಾಡಿವ ಸ್ಥಿತಿ ನಿರ್ಮಾಣವಾಗಿದ್ದು, ಇನ್ನಷ್ಟು ಮಂದಿಗೆ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇದೆ ಈಗಾಗಲೇ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ ಕೊರತೆ ಎದುರಾಗಿದೆ ಇಂತಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಲಾಕ್ ಡೌನ್ ಸೇರಿದಂತೆ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ವಿಶ್ವದ ಅನೇಕ ದೇಶಗಳು ತಮ್ಮ ಕೈಲಾದ ಸಹಾಯವನ್ನು ಭಾರತಕ್ಕೆ ನೀಡುವ ಮೂಲಕ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಈಗಾಗಲೇ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿ ಅಗತ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷ ಚೀನಾ ಗಂಭೀರವಾದ ಸಮಸ್ಯೆ ಎದುರಿಸಿತ್ತು.ಅದು ಕೈಗೊಂಡ ಕಾರ್ಯಕ್ರಮಗಳಿಂದಾಗಿ ಸೋಂಕು ನಿಯಂತ್ರಣ ಮಾಡಿದೆ .ಅದೇ ರೀತಿ ಭಾರತದಲ್ಲಿ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.