ದೇಶದ್ರೋಹಿ ಚಟುವಟಕೆ ನಡೆಸುತ್ತಿರುವ ಪಿಎಫ್‌ಐ

ಉಡುಪಿ, ಡಿ.೨೮- ಪಿಎಫ್‌ಐ ದೇಶದ್ರೋಹಿ ಚಟುವಟಿಕೆ ನಡೆಸುತ್ತಿದೆ. ಈ ರೀತಿಯ ಯಾವುದೇ ಚಟುವಟಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಎಫ್‌ಐ ಕಾರ್ಯಕರ್ತರು ತನ್ನ ಕಚೇರಿಗೆ ಮುತ್ತಿಗೆ ಹಾಕಿದ ಕುರಿತು ಪ್ರತಿಕ್ರಿಯಿಸಿದ ಅವರು, ಪಿಎಫ್‌ಐ ದೇಶದ್ರೋಹಿ ಚಟುವಟಿಕೆ ನಡೆಸುತ್ತಿದೆ. ಕಾನೂನು ತನ್ನದೇ ಕ್ರಮಕೈಗೊಳ್ಳುತ್ತದೆ. ಈ ತರದ ಯಾವುದೇ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಯಾವುದೇ ಬಂಧನ ಆದಾಗ ಕಾನೂನು ಪ್ರಕಾರ ಹೋರಾಟ ಮಾಡಬೇಕೇ ಹೊರತು ಮುತ್ತಿಗೆ ಹಾಕುವುದಲ್ಲ. ಮುತ್ತಿಗೆ ಹಾಕುವುದು ಒಂದು ರೀತಿಯ ಭಯೋತ್ಪಾದನೆ ಚಟುವಟಕೆಯಾಗಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಗಂಭೀರತೆ ಪಡೆದುಕೊಳ್ಳಲಿದೆ. ಮಂಗಳೂರಿನ ಗೋಡೆಗಳಲ್ಲಿ ರಾಷ್ಟ್ರವಿರೋಧಿ ಹೇಳಿಕೆ ಬರೆಯಲಾಗಿತ್ತು. ಎಲ್ಲಾ ಕೃತ್ಯದ ಹಿಂದೆ ಭಯೋತ್ಪಾದನೆ ಚಟುವಟಕೆ ಇದೆ. ನಮ್ಮ ಸರ್ಕಾರ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ. ಎಲ್ಲದಕ್ಕೂ ಉತ್ತರ ನೀಡಲಿದ್ದೇವೆ ಎಂದು ಕಟೀಲ್ ತಿಳಿಸಿದರು.