ದೇಶದ ಅಭಿವೃದ್ಧಿಗೆ ಸೂಕ್ತ ಅಭ್ಯರ್ಥಿ ಆಯ್ಕೆಗೆ ಮನವಿ

ಕೆ.ಆರ್.ಪುರ, ಜ.೨೫-ಯುವಜನತೆ ದೇಶದ ಬೆನ್ನೆಲುಬಾಗಿದ್ದು, ದೇಶದ ಅಭಿವೃದ್ಧಿಗೆ ಶ್ರಮಿಸುವ ನವಮತ
ದಾರರು,ದೇಶದ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಅಭ್ಯರ್ಥಿಗಿ ಮತನೀಡಿ ಕೈಜೋಡಿಸಬೇಕೆಂದು ಮಾಜಿ ಸಚಿವ ಬೈರತಿ ಬಸವರಾಜ್ ಅವರು ತಿಳಿಸಿದರು.
ಕೆ.ಆರ್.ಪುರ ಕ್ಷೇತ್ರದ ಸಿಲಿಕಾನ್ ಸಿಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ನಮೋ ನವಮತದಾತ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು.
ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಅನನ್ಯವಾಗಿದ್ದು,ದೇಶದ ಅಭಿವೃದ್ಧಿಗೆ ಸೂಕ್ತವಾದ ಅಭ್ಯರ್ಥಿಗಳ ಆಯ್ಕೆ ಮಾಡಬೇಕೆಂದು ನುಡಿದರು.
ಸಿಲಿಕಾನ್ ಸಿಟಿ ಕಾಲೇಜಿನ ಅಧ್ಯಕ್ಷ ಡಾ.ಚಂದ್ರಶೇಖರ್ ಅವರು ಮಾತನಾಡಿ ಯುವ ಜನತೆ ಮತದಾನ ಪ್ರಕ್ರಿಯೆಯಲ್ಲಿ ಕ್ರಿಯಾಶೀಲತೆಯಿಂದ ಭಾಗವಹಿಸುವಂತೆ ಕಿವಿಮಾತು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ ದೇಶದ ಸಮಗ್ರ ಅಭಿವೃದ್ಧಿ ಭದ್ರ ಬುನಾದಿ ಹಾಕುವ ನಿಟ್ಟಿನಲ್ಲಿ ನವಮತದಾತ ಆಲೋಚನೆ ಮಾಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್, ಅಂತೋಣಿಸ್ವಾಮಿ,ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಯಶಸ್ ರೆಡ್ಡಿ, ಮುಖಂಡರಾದ ಕೃಷ್ಣ ಮತ್ತಿತರರು ಇದ್ದರು.