ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಪ್ರಮುಖ: ಸಂತೋಷ ಎಸ್. ಕುಂದರ್

ವಿಜಯಪುರ, ಮೇ.18: ಒಂದು ದೇಶದ ಅಭಿವೃದ್ಧಿ ಅಲ್ಲಿನ ಕಾರ್ಮಿಕರ ಮೇಲೆ ಅವಲಂಬಿತವಾಗಿರುತ್ತದೆ. ಸದೃಢ ದೇಶ ಕಟ್ಟುವಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆÉ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಎಸ್. ಕುಂದರ್ ಹೇಳಿದರು.
ಬುಧವಾರ ನಗರದ ಶಿವಗಿರಿ ರಸ್ತೆಗೆ ಇರುವ ಲೊಯೋಲ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಅನೌಪಚಾರಿಕ ಶಿಕ್ಷಣ ಸಂಸ್ಥೆ, ಲೊಯೋಲ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಬಿಜಾಪುರ ನಗರ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಯೂನಿಯನ್(ರಿ), ವಿಜಯಪುರ ಇವರ ಆಶ್ರಯದಲ್ಲಿ ನಡೆದ ವಿಶ್ವ ಕಾರ್ಮಿಕರ ದಿನಾಚರಣೆ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದ ಬೆಳವಣಿಗೆಗೆ ಕಾರ್ಮಿಕರ ಕೊಡುಗೆ ಅನನ್ಯವಾಗಿದೆ. ಕಾರ್ಮಿಕರಿಗೆ ಏನಾದರೂ ತೊಂದರೆ ಊಂಟಾದರೆ ಉಚಿತ ಕಾನೂನು ಸೇವಾ ಪ್ರಾಧಿಕಾರಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕÀ ಫಾದರ್ ಟಿಯೋಲ್ ಮಚಾದೋ ಪ್ರಾಸ್ತಾವಿಕವಾಗಿ ಮಾತನಾಡಿ, ಹಲವಾರು ಯೋಜನೆಗಳು ಕಾರ್ಮಿಕರಿಗಿದ್ದು, ಅವುಗಳನ್ನು ಪಡೆದುಕೊಳ್ಳಲು ಮುಂದಾಗಬೇಕೆಂದು ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಎಸ್.ಜಿ. ಖೈನೂರ, ವಿಜಯಪುರ 2ನೇ ವೃತ್ತ ಕಾರ್ಮಿಕ ನಿರೀಕ್ಷಕಿ ಜಗದೇವಿ ಸಜ್ಜನ, ಐಟಿಐ ಕಾಲೇಜ್ ಪ್ರಾಂಶುಪಾಲ ಫಾದರ್ ಆ್ಯಂಟನಿ ಲಾರೆನ್ಸ್ ವೇದಿಕೆ ಮೇಲಿದ್ದರು.
ಕಾರ್ಯಕ್ರಮದಲ್ಲಿ ವಿಜಾಪುರ ನಗರ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಯೂನಿಯನ್‍ನ ಪದಾಧಿಕಾರಿಗಳು ಮತ್ತು ವಿವಿಧ ಸ್ಥಳೀಯ ಕಾರ್ಮಿಕ ಸಂಘಗಳಿಂದ ಪುರುಷ ಮತ್ತು ಮಹಿಳಾ ಕಾರ್ಮಿಕರು ಮತ್ತು ಲೊಯೋಲ ತಾಂತ್ರಿಕ ತರಬೇತಿ ಶಾಲೆಯ ಮಕ್ಕಳು, , ಶಿಕ್ಷಕರು, ಒಟ್ಟು 120 ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.