ದೇಶದ ಎಲ್ಲಿರಿಗೂ ಡಿಸೆಂಬರ್ ಅಂತ್ಯಕ್ಕೆ ಲಸಿಕೆ ಗುರಿ

ನವದೆಹಲಿ, ಮೇ.28- ಈ ವರ್ಷದ ಡಿಸೆಂಬರ್ ಅಂತ್ಯದವರೆಗೆ ದೇಶದ ಎಲ್ಲ ಜನರಿಗೆ ಕೊರೊನಾ ಲಸಿಕೆ ಹಾಕುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

ಈ ಕುರಿತು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು 2021ರ ಡಿಸೆಂಬರ್ ಅಂತ್ಯದ ವೇಳೆಗೆ ದೇಶದಲ್ಲಿ 216 ಕೋಟಿ ಲಸಿಕೆ ಲಭ್ಯವಿರಲಿದೆ ಅದನ್ನು‌108 ಕೋಟಿ ಜನರಿಗೆ ಹಾಕುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದರು.

ದೇಶದ ಎಲ್ಲ ಜನರಿಗೂ ಲಸಿಕೆ ಹಾಕುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಇದನ್ನು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅರ್ಥಮಾಡಿಕೊಳ್ಳಬೇಕು ಎಂದು ಅವರು ದೂರಿದ್ದಾರೆ.

2024 ಬಂದರೂ ಕೇಂದ್ರ ಸರ್ಕಾರ ದೇಶದ ಎಲ್ಲ ಜನರಿಗೆ ಲಸಿಕೆ ಹಾಕುವುದಿಲ್ಲ ಎನ್ನುವ ರಾಹುಲ್ ಗಾಂಧಿಯವರ ಹೇಳಿಕೆಗೆ ತಿರುಗೇಟು ನೀಡಿದ ಅವರು ವರ್ಷದ ಅಂತ್ಯದಲ್ಲಿ ದೇಶದ ಎಲ್ಲ ಜನರಿಗೆ ಸಂಪೂರ್ಣ ಲಸಿಕೆ ಹಾಕಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಲಸಿಕೆ ಲಭ್ಯವಾದ ಬಳಿಕ ಎಲ್ಲರಿಗೂ ಲಸಿಕೆ ಹಾಕಲಾಗುವುದು ಇದರಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.

ನೌಟಂಕಿ ಆಟ: ಆರೋಪ

ಕೊರೋನಾ ಸೋಂಕಿನ ವಿಷಯದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನೌಟಂಕಿ ಆಟ ಆಡುತ್ತಿದ್ದಾರೆ .ಸಂಕಷ್ಟದ ಸಮಯದಲ್ಲಿ ವೈದ್ಯರು ಮತ್ತು ಕೇಂದ್ರ ಸರ್ಕಾರದ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ದೇಶದಲ್ಲಿ ಇದುವರೆಗೆ 20 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಹೇಳಿದ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಇನ್ನೂ ಒಂದೂವರೆ ಕೋಟಿಗೂ ಅಧಿಕ ಲಸಿಕೆ ಬಾಕಿ ಇದೆ ಎಂದು ಅವರು ತಿಳಿಸಿದ್ದಾರೆ.

ದೇಶದಲ್ಲಿ ಕೋರೋಣ ಲಸಿಕೆ ಅಭಾವವಿರುವ ಹಿನ್ನಲೆಯಲ್ಲಿ ಸದ್ಯಕ್ಕೆ 18ರಿಂದ 45 ವರ್ಷ ವಯೋಮಾನದವರಿಗೆ ಲಸಿಕೆ ಹಾಕಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಒಂದು ಬಾರಿ ಲಸಿಕೆ ಲಭ್ಯವಾದ ನಂತರ ಎಲ್ಲಾ ಜನರಿಗೆ ಲಸಿಕೆ ಹಾಕುವ ಉದ್ದೇಶ ಹೊಂದಲಾಗಿದೆ ಎಂದು ಅವರು ತಿಳಿಸಿದರು.