ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರಯೋಧರ ಬಲಿದಾನ ಯುವ ಪೀಳಿಗೆ ಅರಿತುಕೊಳ್ಳಬೇಕು: ಹರ್ಷವರ್ಧನ್

ವಿಜಯಪುರ, ಮಾ.29-ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ್ರತಿಯೊಬ್ಬ ವೀರಯೋಧರ ತ್ಯಾಗ, ಬಲಿದಾನಗಳ ಬಗ್ಗೆ ಮುಂಬರುವ ಯುವ ಪೀಳಿಗೆ ಅರಿತುಕೊಳ್ಳಬೇಕು. ಅವರ ಜೀವನ-ಸಾಧನೆಯನ್ನು ನಾವೆಲ್ಲ ಸ್ಪೂರ್ತಿಯಾಗಿ ತೆಗೆದು ಕೊಂಡಾಗ ಮಾತ್ರ ಸಧೃಡ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ಹುಬ್ಬಳ್ಳಿಯ ಮಹಿಳಾ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮಿ ಹರ್ಷವರ್ಧನ್ ಶೀಲವಂತ್ ಹೇಳಿದರು.
ಅವರು ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶವು ಹಮ್ಮಿಕೊಂಡಿದ್ದ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಎಂಬ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತ ಸ್ವಾತಂತ್ರ್ಯ ಪಡೆಯುವುದಕ್ಕಾಗಿ ಸಾವಿರಾರು ಸೈನಿಕರ ಮಾಡಿದ ಹೋರಾಟ ಮತ್ತು ಸ್ವಾತಂತ್ರ ಯೋಧರ ತ್ಯಾಗ ಬಲಿದಾನಗಳ ಬಗ್ಗೆ ತಿಳಿಸಲು ಈ ತರಹದ ಕಾರ್ಯಕ್ರಮಗಳು ಉಪಕಾರಿಯಾಗಿವೆ. ಜೊತೆಗೆ ರಾಷ್ಟ್ರೀಯ ಭಾವೈಕ್ಯತೆ, ದೇಶದ ಸಮಗ್ರತೆ ಮತ್ತು ಸಂವಿಧಾನದ ಆಶಯಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲು ಇದು ಉಪಯುಕ್ತವಾಗಿದೆ ಎಂದರು.
2025ರ ಹೊತ್ತಿಗೆ ನಮ್ಮ ದೇಶವನ್ನು ಗ್ಲೋಬಲ್ ಲೀಡರ್ ಮಾಡುವಲ್ಲಿ ನಾವೆಲ್ಲರೂ ಶ್ರಮಿಸಬೇಕು ಅಂದಾಗ ಮಾತ್ರ ನಮ್ಮ ದೇಶ ವಿಶ್ವಕ್ಕೆ ಮಾದರಿಯಾಗಿ ನಿಲ್ಲಬಹುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ತಮ್ಮ ನೆಲೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಹಿಳಾ ವಿವಿಯ ಕುಲಪತಿ ಪೆÇ್ರ.ಬಿ.ಕೆ.ತುಳಸಿಮಾಲ, ಅನೇಕ ಸ್ವಾತಂತ್ರ್ಯ ಯೋಧರ ತ್ಯಾಗ ಬಲಿದಾನದಿಂದಾಗಿ ಇಂದು ನಾವೆಲ್ಲ ಸ್ವಾತಂತ್ರ್ಯವನ್ನು ಅನುಭವಿಸುವಂತಾಗಿದೆ. 75 ವರ್ಷಗಳಲ್ಲಿ ಭಾರತ ಸಾಕಷ್ಟು ಪ್ರಗತಿಯನ್ನು ಸಾಧಿಸಿದೆ. ಆದಾಗ್ಯೂ ಭಾರತವನ್ನು ಮಾದರಿ ದೇಶವನ್ನಾಗಿ ಮಾಡಲು ಪ್ರಸ್ತುತ ಯುವಜನತೆ ಮಾಡಬೇಕಾದ ಕಾರ್ಯಗಳು ಬಹಳಷ್ಟಿವೆ ಎಂದರು.
ನಮ್ಮ ದೇಶದ ಸರ್ವತೋಮುಖ ಬೆಳವಣಿಗೆಗಾಗಿ ನಾವೆಲ್ಲರೂ ಶ್ರಮಿಸಬೇಕಾಗಿದೆ. ಕೃಷಿ ಕ್ಷೇತ್ರದ ಅಭಿವೃದ್ಧಿ, ಕೈಗಾರಿಕಾ ಅಭಿವೃದ್ಧಿ, ಮಾನವ ಅಭಿವೃದ್ಧಿ ಹೀಗೆ ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಗೆ ಬೇಕಾಗಿರುವ ಕೌಶಲ್ಯವನ್ನು, ಜ್ಞಾನವನ್ನು, ವಿಚಾರಗಳನ್ನು ನಮ್ಮಲ್ಲಿ ನಾವು ಬೆಳೆಸಿಕೊಳ್ಳಬೇಕು ಜೊತೆಗೆ ನಮ್ಮ ವಿಚಾರಗಳನ್ನು ಇನ್ನೊಬ್ಬರೊಂದಿಗೆ ಆ ನಿಟ್ಟಿನಲ್ಲಿ ಕೆಲಸ ಮಾಡಿದಾಗ ಮಾತ್ರ ನಮ್ಮದೇಶ ಪ್ರಗತಿ ಹೊಂದಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ನರಸಿಂಹ ರಾಯಚೂರು, ಎನ್‍ಎಸ್‍ಎಸ್ ಕಾರ್ಯಕ್ರಮಅಧಿಕಾರಿಡಾ. ಕಲಾವತಿ ಕಾಂಬ್ಳೆ, ಜೆನಿಫರ್ ಸೌಲಮ್, ಹಾಗೂ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು, ಬೋಧಕ-ಬೋಧಕೇತರ ಸಿಬ್ಬಂದಿ, ಶಿಬಿರಾರ್ಥಿಗಳು, ವಿವಿಧ ರಾಜ್ಯಗಳ ಎನ್‍ಎಸ್‍ಎಸ್. ಕಾರ್ಯಕ್ರಮ ಅಧಿಕಾರಿಗಳು ಉಪಸ್ಥಿತರಿದ್ದರು.
ಎನ್‍ಎಸ್‍ಎಸ್ ಕಾರ್ಯಕ್ರಮ ಅಧಿಕಾರಿ ಅಕ್ಷಯ್ ಯಾರ್ದಿ ಕಾರ್ಯಕ್ರಮವನ್ನು ನಿರೂಪಿಸಿದರು. ಎನ್.ಎಸ್.ಎಸ್. ಕಾರ್ಯಕ್ರಮ ಸಂಯೋಜಕ ಪೆÇ್ರ.ನಾಮದೇವಗೌಡ ವಂದಿಸಿದರು.