ದೇಶದ 10 ಕೋಟಿ ಜನರನ್ನು ವಿಕಸಿತ ಭಾರತ ಸಂಕಲ್ಪ ಯಾತ್ರೆ ತಲುಪಿದೆ : ಸಂಸದ ಜಿ.ಎಂ.ಸಿದ್ದೇಶ್ವರ

ಸಂಜೆವಾಣಿ ವಾರ್ತೆ

ದಾವಣಗೆರೆ. ಜ.೧೪; ವಿಕಸಿತ ಭಾರತ ಸಂಕಲ್ಪ ಯಾತ್ರೆ ಪ್ರಾರಂಭವಾದ 57 ದಿನಗಳಲ್ಲಿ ಈ ದೇಶದ ಮೂಲೆ ಮೂಲೆಯ ಗ್ರಾಮಗಳನ್ನು ತಲುಪುವ ಮೂಲಕ ಸುಮಾರು 10 ಕೋಟಿ ಜನರನ್ನು ಈ ಯಾತ್ರೆ ತಲುಪಿದೆ. ಇಲ್ಲಿಯವರೆಗೆ ಸರ್ಕಾರಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಒಂದು ಸರ್ಕಾರ ನಡೆಸುತ್ತಿರುವ ಅತಿ ದೊಡ್ಡ ಯಾತ್ರೆ ಇದಾಗಿದೆ.ಯಾರು ಕೂಡ ಸರ್ಕಾರದ ಯೋಜನೆಗಳಿಂದ ಹೊರಗುಳಿಯಬಾರದು ಎಂಬುದು ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಆಶಯವಾಗಿದೆ ಎಂದು  ದಾವಣಗೆರೆ ನಗರದ ವಿಜಯಲಕ್ಷ್ಮೀ ರಸ್ತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಕಸಿತ ಭಾರತ ಸಂಕಲ್ಪಯಾತ್ರೆಯನ್ನು ಉದ್ಘಾಟಿಸಿ ಸಂಸದ ಜಿ.ಎಂ.ಸಿದ್ದೇಶ್ವರ ಮಾತನಾಡಿದರು.ಜನರ ಜೀವನ ಮಟ್ಟ ಸುಧಾರಿಸಲು ಕೇಂದ್ರ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸ್ವಾತಂತ್ರ ಬಂದು 75 ವರ್ಷಗಳಾಗಿದ್ದರೂ ಕೂಡ ಈ ದೇಶದ ಸುಮಾರು 30 ಕೋಟಿಗೂ ಹೆಚ್ಚು ಜನರು ಬ್ಯಾಂಕಿAಗ್ ಸೇವೆಗಳಿಂದ ಹೊರಗುಳಿದಿದ್ದರು, ಇವರೆಲ್ಲರಿಗೂ ಶೂನ್ಯ ಡಿಪಾಸಿಟ್‌ನಲ್ಲಿ ಖಾತೆ ತೆರೆಯಲು ಜನ್‌ಧನ್ ಯೋಜನೆ ಆರಂಭಿಸಿದರೆ, ಈ ದೇಶವಾಸಿಗಳು ಸುಮಾರು 2 ಲಕ್ಷ ಕೋಟಿ ಹಣವನ್ನು ಖಾತೆಗಳಲ್ಲಿ ಜಮಾ ಮಾಡುವ ಮೂಲಕ ಔದಾರ್ಯ ಮೆರೆದಿದ್ದಾರೆ. ಡೈರೆಕ್ಟ್ ಬೆನಿಫಿಟ್ ಟ್ರಾನ್ಸಫರ್ ಮೂಲಕ ಸರ್ಕಾರದಿಂದ ಪರಿಹಾರದ ಹಣ ಅಥವಾ ಇನ್ಯಾವುದೇ ಹಣ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ರೈತರ ಖಾತೆಗೆ ನೇರವಾಗಿ ಜಮಾ ಆಗಲಿದೆ. ದಾವಣಗೆರೆ ಜಿಲ್ಲೆಯಲ್ಲಿ ಮುದ್ರಾ ಯೋಜನೆಯಡಿ ಸುಮಾರು 960 ಕೋಟಿಯಷ್ಟು ಹಣವನ್ನು ಸಣ್ಣ ಸಣ್ಣ ಉದ್ಯಮಿಗಳಿಗೆ ಸಾಲ ನೀಡಲಾಗಿದೆ ಎಂದರು. ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯ ಮೂಲಕ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಸುಮಾರು 35 ಕೋಟಿ ಸಾಲ ವಿತರಣೆ ಮಾಡಲಾಗಿದೆ.ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಸುಮಾರು ಈಗಾಗಲೇ 194 ಗ್ರಾಮ ಪಂಚಾಯತಿಗಳಲ್ಲಿ ಕ್ರಮಿಸಿದೆ, ಪಟ್ಟಣ ಪ್ರದೇಶಗಳಲ್ಲಿ ಸುಮಾರು 10 ಸ್ಥಳಗಳಲ್ಲಿ ಕಾರ್ಯಕ್ರಮ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಉಜ್ವಲ ಯೋಜನೆಯಡಿ ಹಲವಾರು ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಂಪರ್ಕಗಳನ್ನು ವಿತರಣೆ ಮಾಡಿದರು.ಕಾರ್ಯಕ್ರಮದಲ್ಲಿ ಸಂಸದರ ಜೊತೆ ಮುಖಂಡರುಗಳಾದ ಯಶವಂತರಾವ್ ಜಾಧವ್, ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷರಾದ ವಿರೇಶ್ ಹನಗವಾಡಿ, ಮಹಾನಗರ ಪಾಲಿಕೆ ಸದಸ್ಯರುಗಳಾದ ಆರ್.ಎಲ್. ಶಿವಪ್ರಕಾಶ್, ಸೋಗಿ ಶಾಂತಕುಮಾರ್, ಮುಖಂಡರುಗಳಾದ ಬಿ.ಎಸ್.ಜಗದೀಶ್, ವೈ.ಮಲ್ಲೇಶ್, ಕಿಶೋರ್ ಕುಮಾರ್, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಾಶ್, ರಾಜು ನೀಲಗುಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.

One attachment • Scanned by Gmail

ReplyForward