
ಬೆಂಗಳೂರು, ಮೇ ೨೨- ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಇಂದು ಬೆಳಿಗ್ಗೆ ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಹಂಗಾಮಿ ವಿಧಾನಸಭಾಧ್ಯಕ್ಷರಾದ ಆರ್.ವಿ. ದೇಶಪಾಂಡೆಯವರಿಗೆ ಪ್ರಮಾಣ ವಚನ ಬೋಧಿಸಿದರು.
ಹಂಗಾಮಿ ವಿಧಾನಸಭಾಧ್ಯಕ್ಷರಾದ ಆರ್.ವಿ. ದೇಶಪಾಂಡೆಯವರು ಇಂದಿನಿಂದ ನಡೆಯುವ ಮೂರು ದಿನಗಳ ಅಧಿವೇಶನದಲ್ಲಿ ಸಭಾಧ್ಯಕ್ಷರ ಕಾರ್ಯಭಾರ ನಿಭಾಯಿಸುವರು.
ದೇಶಪಾಂಡೆ ಹೇಳಿಕೆ
ಹಂಗಾಮಿ ಸಭಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ವಿ. ದೇಶಪಾಂಡೆಯವರು ರಾಜ್ಯಪಾಲರು ನನಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಇದು ಬಹಳ ದೊಡ್ಡ ಮಹತ್ವದ ಕಾರ್ಯ. ಪ್ರಮಾಣ ವಚನದ ಬಳಿಕ ವಿಧಾನಸಭೆಗೆ ಆಯ್ಕೆಯಾಗಿರುವ ಎಲ್ಲ ಸದಸ್ಯರು ಸಂವಿಧಾನದ ಪ್ರಕಾರ ಶಾಸಕರಾಗಿ ಕಾರ್ಯನಿರ್ವಹಿಸುವರು ಎಂದರು.
ನಾನು ಈ ಪ್ರಮಾಣ ವಚನ ಕಲಾಪದಲ್ಲಿ ಪ್ರಸಿಡಿಂಗ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಮೇ ೨೪ಕ್ಕೆ ನೂತನ ಸಭಾಧ್ಯಕ್ಷರ ಆಯ್ಕೆ ನಡೆಯಲಿದೆ ಎಂದರು.
ನೀವೇ ಸ್ಪೀಕರ್ ಆಗಿ ಮುಂದುವರೆಯುತ್ತೀರಾ ಎನ್ನುವ ಪ್ರಶ್ನೆಗೆ, ನನಗೆ ಯಾವುದೇ ಆಸೆ ಇಲ್ಲ. ೮
ಮುಖ್ಯಮಂತ್ರಿಗಳ ಜತೆ ಕೆಲಸ ಮಾಡಿದ್ದೇನೆ. ಪಕ್ಷ ಯಾವ ಜವಾಬ್ದಾರಿ ನೀಡುತ್ತದೋ ಅದನ್ನು ನಿರ್ವಹಿಸುತ್ತೇನೆ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂದರು.