ನವದೆಹಲಿ,ಮಾ.೨೬;ಕಾಂಗ್ರೆಸ್‌ನ ಯುವರಾಜ ರಾಹುಲ್‌ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಇಂದು ದೇಶಾದ್ಯಂತ ಒಂದು ದಿನದ ಪ್ರತಿಭಟನಾ ಸತ್ಯಾಗ್ರಹ ನಡೆಸಿದೆ.ನವದೆಹಲಿಯಲ್ಲಿರುವ ಮಹಾತ್ಮಗಾಂಧಿಜೀ ಅವರ ಸಮಾಧಿ ಇರುವ ರಾಜ್‌ಘಾಟ್‌ನಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಗಾಂಧಿ ಸೇರಿದಂತೆ ಎಲ್ಲ ಪ್ರಮುಖ ನಾಯಕರುಗಳು ಇಂದು ಬೆಳಿಗ್ಗೆಯಿಂದಲೇ ಸಂಕಲ್ಪ ಸತ್ಯಾಗ್ರಹ ಹೆಸರಿನಲ್ಲಿ ನಡೆದಿರುವ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದು, ಇಂದು ಸಂಜೆ ೫ರವರೆಗೂ ಈ ಸತ್ಯಾಗ್ರಹ ನಡೆಯಲಿದೆ.ರಾಜ್‌ಘಾಟ್‌ನಲ್ಲಿ ಕಾಂಗ್ರೆಸ್‌ನ ಸಂಕಲ್ಪ ಸತ್ಯಾಗ್ರಹಕ್ಕೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದರೂ ಕಾಂಗ್ರೆಸ್ ಪಕ್ಷ ಅದನ್ನು ಲೆಕ್ಕಿಸದೆ ಸಂಕಲ್ಪ ಸತ್ಯಾಗ್ರಹವನ್ನು ನಡೆಸಿತು.ರಾಹುಲ್‌ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಈ ಸತ್ಯಾಗ್ರಹ ನಡೆದಿದ್ದು, ಎಲ್ಲ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ತಮ್ಮ ರಾಜ್ಯಗಳಲ್ಲಿ ಈ ಪ್ರತಿಭಟನಾ ಸತ್ಯಾಗ್ರಹವನ್ನು ನಡೆಸಿವೆ.ಮೋದಿ ಉಪನಾಮದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ನ ನ್ಯಾಯಾಲಯ ರಾಹುಲ್‌ಗಾಂಧಿ ಅವರಿಗೆ ೨ ವರ್ಷದ ಜೈಲುಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.
ರಾಹುಲ್‌ಗಾಂಧಿ ಅವರನ್ನು ಲೋಕಸಭಾ ಸ್ಥಾನದಿಂದ ಅನರ್ಹಗೊಳಿಸಿದ್ದರ ವಿರುದ್ಧ ಕಾಂಗ್ರೆಸ್ ಪಕ್ಷ ಕಿಡಿಕಾರಿ ಇದರ ವಿರುದ್ಧ ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಹೇಳಿತ್ತು. ಅದರಂತೆ ಇಂದು ದೇಶಾದ್ಯಂತ ಕಾಂಗ್ರೆಸ್ ಪಕ್ಷ ಧರಣಿ ಸತ್ಯಾಗ್ರಹ ನಡೆಸಿದೆ.
ವಾಗ್ದಾಳಿ
ಪ್ರತಿಭಟನಾ ಸತ್ಯಾಗ್ರಹದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಹುಲ್‌ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಾಗ್ದಾಳಿ ನಡೆಸಿದರು. ಅದಾನಿ ಪ್ರಕರಣದಿಂದ ಇಕ್ಕಟ್ಟಿಗೆ ಸಿಲುಕಿರುವ ಕೇಂದ್ರ ಸರ್ಕಾರ, ಜನರ ಗಮನವನ್ನು ಬೇರೆಡೆ ಸೆಳೆಯಲು ಈ ರೀತಿಯ ತಂತ್ರ ನಡೆಸಿದೆ ಎಂದು ಅವರು ಕಿಡಿಕಾರಿದರು.ರಾಹುಲ್‌ಗಾಂಧಿ ಸಹ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಸತ್ ಸದಸ್ಯತ್ವದಿಂದ ಜೀವನಪೂರ್ತಿ ಅನರ್ಹಗೊಳಿಸಿ ಅಥವಾ ಜೀವನವಿಡೀ ಜೈಲಿಗೆ ತಳ್ಳಿದರೂ ನಾನು ಹೆದರುವುದಿಲ್ಲ. ಪ್ರಜಾಪ್ರಭುತ್ವ ರಕ್ಷಣೆಯ ಹೋರಾಟ ಬಿಡುವುದಿಲ್ಲ ಎಂದು ಗುಡುಗಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳಲು ನಾನು ಸಾರ್ವಕರ್ ಅಲ್ಲ, ಎಂದಿಗೂ ಕ್ಷಮೆಯಾಚಿಸುವುದಿಲ್ಲ ಎಂದು ರಾಹುಲ್‌ಗಾಂಧಿ ಹೇಳಿದ್ದರು.

ರಾಜ್ಯದಲ್ಲೂ ಕೈ ನಾಯಕರ ಪ್ರತಿಭಟನೆ
ಕಾಂಗ್ರೆಸ್‌ನ ಯುವರಾಜ ರಾಹುಲ್‌ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ದೇಶಾದ್ಯಂತ ನಡೆದಿರುವ ಪ್ರತಿಭಟನೆಯ ಭಾಗವಾಗಿ ರಾಜ್ಯದಲ್ಲೂ ಕಾಂಗ್ರೆಸ್ ನಾಯಕರು ಧರಣಿ ಸತ್ಯಾಗ್ರಹ ನಡೆಸಿದರು.ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿರುವ ರಾಷ್ಟ್ರಕವಿ ಕುವೆಂಪುರವರ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟuನಾ ಧರಣಿ ನಡೆಸಿ ರಾಹುಲ್‌ಗಾಂಧಿ ಅವರ ಲೋಕಸಭಾ ಸದಸ್ಯತ್ವವವನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿದರು.ಈ ಪ್ರತಿಭಟನಾ ಸತ್ಯಾಗ್ರಹದಲ್ಲಿ ರಾಜ್ಯ ಕಾಂಗ್ರೆಸ್ ಉ=ಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕರುಗಳಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತಾ ಸೇರಿದಂತೆ ಕಾಂಗ್ರೆಸ್‌ನ ಹಲವು ಶಾಸಕರು, ಸಂಸದರು,
ಹಿರಿಯ ಮುಖಂಡರುಗಳು ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.