ದೇಶಾದ್ಯಂತ ಜ.2 ರಿಂದ ಪ್ರಾಯೋಗಿಕ ಲಸಿಕೆ ವಿತರಣೆ

ನವದೆಹಲಿ, ಡಿ.31- ಇತ್ತೀಚೆಗಷ್ಟೇ 4 ರಾಜ್ಯಗಳಲ್ಲಿ ಪ್ರಾಯೋಗಿಕ ಕೊರೋನಾ ಲಸಿಕಾ ಕಾರ್ಯಕ್ರಮ ನಡೆಸಿದ್ದ ಕೇಂದ್ರ ಸರ್ಕಾರ ಇದೀಗ ದೇಶಾದ್ಯಂತ ಜನವರಿ 2ರಿಂದ ಪ್ರಾಯೋಗಿಕ ಲಸಿಕೆ “ಡ್ರೈ ರನ್” ಹಾಕುವಂತೆ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದೆ.

ದೇಶದಲ್ಲಿ ಕೊರೋನಾ ಲಸಿಕೆ ತುರ್ತು ಬಳಕೆಗೆ ಯಾವುದೇ ಕ್ಷಣದಲ್ಲಿ ಅನುಮತಿ ಸಿಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಅದರ ಪ್ರಾಯೋಗಿಕ ಪರೀಕ್ಷೆ ಕೈಗೊಳ್ಳುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ.

ದೇಶದ ಎಲ್ಲ ರಾಜ್ಯಗಳಲ್ಲಿ ಆಯ್ದ ಪ್ರದೇಶಗಳಲ್ಲಿ ಕೊರಗುತ್ತಿದೆ ಲಸಿಕೆ ಹಾಕಿಸುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಸಮಿತಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ನಿರ್ದೇಶನ ನೀಡಲಾಗಿದೆ.

ಡಿ. 28 ಮತ್ತು 29ರಂದು 4ರಾಜ್ಯಗಳಲ್ಲಿ ಪ್ರಾಯೋಗಿಕವಾಗಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು..

ಕೊರೋನೋ ಸೋಂಕಿಗೆ ಲಸಿಕೆ ಲಭ್ಯವಾದ ಬಳಿಕ ಲಸಿಕೆ ಹಾಕುವಾಗ ಎದುರಾಗುವ ಸಮಸ್ಯೆಗಳನ್ನು ಪತ್ತೆ ಮಾಡಲು ಈ ಪ್ರಾಯೋಗಿಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಮಿತಿ ಸಭೆಯಲ್ಲಿ ಜನವರಿ 2ರಂದು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರಾಯೋಗಿಕ ಲಸಿಕೆ ಹಾಕುವಂತೆ ಸೂಚಿಸಿದೆ.

ಇತ್ತೀಚೆಗೆ ಎರಡು ದಿನಗಳ ಕಾಲ ನಡೆದ ಪ್ರಾಯೋಗಿಕ ಲಸಿಕೆ ಹಾಕುವ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಈ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಉದ್ದೇಶಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತಿಳಿಸಿದೆ.

ಹೊಸ ವರ್ಷದ ಆರಂಭದಲ್ಲಿ ಕೊರೋನೋ ಸೋಂಕಿಗೆ ತುರ್ತು ಬಳಕೆ ಅನುಮತಿ ನೀಡುವ ಸಾಧ್ಯತೆಗಳಿವೆ ಹೀಗಾಗಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರಾಯೋಗಿಕ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಭಾರತೀಯ ಔಷಧ ಮಹಾನಿಯಂತ್ರಕ ಡಾ.ವಿ.ಜಿ ಸೋಮಾನಿ ತಿಳಿಸಿದ್ದಾರೆ

  • ಕೊರೊನಾ ಸೋಂಕಿಗೆ‌ ತುರ್ತು ಔಷಧಿ ಬಳಕೆಗೆ ಯಾವುದೇ ಕ್ಷಣದಲ್ಲಿ ಅನುಮತಿ ಸಾಧ್ಯತೆ
  • ಜನವರಿ 2ರಿಂದ ಪ್ರಾಯೋಗಿಕ ಲಸಿಕ ಕಾರ್ಯಕ್ರಮ
  • ದೇಶಾದ್ಯಂತ ಹಮ್ಮಿಕೊಳ್ಳಲು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ
  • ಡಿಸೆಂಬರ್ 28 29ರಂದು ನಡೆದ ನಾಲ್ಕು ರಾಜ್ಯಗಳ ಪ್ರಾಯೋಗಿಕ ಪರೀಕ್ಷೆ ಯಶಸ್ವಿ
  • ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಹಮ್ಮಿಕೊಳ್ಳಲು ನಿರ್ಧಾರ
  • ಲಸಿಕೆ ಹಾಕುವಾಗ ಎದುರಾಗುವ ಸಮಸ್ಯೆಗಳನ್ನು ಪತ್ತೆಮಾಡಲು ಪ್ರಾಯೋಗಿಕವಾಗಿ ಲಸಿಕೆ ವಿತರಣೆ