ದೇಶಾದ್ಯಂತ ಲಾಕ್‌ಡೌನ್ ಜಾರಿ ಇಲ್ಲ


ನವದೆಹಲಿ, ಏ. ೧೯- ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದರೂ ದೇಶಾದ್ಯಂತ ಲಾಕ್‌ಡೌನ್ ಮಾಡುವ ಚಿಂತ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಲಾಕ್‌ಡೌನ್ ಬದಲಾಗಿ ಸಣ್ಣ ಪ್ರಮಾಣದ ಕಂಟೈನ್‌ಮೆಂಟ್ ಜೋನ್‌ಗಳನ್ನು ಮಾಡುವತ್ತ ಗಮನಹರಿಸಿ ಸೋಂಕು ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.
ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಣಕಾಸು ಸಚಿವರು ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಿಮೆಗಳ ಅಧ್ಯಕ್ಷ ಅನಿಮೇಶ್ ಸೆಕ್ಸೇನಾ ಜೊತೆ ಸಮಾಲೋಚನೆ ನೀಡಿದ ನಂತರ ದೇಶಾದ್ಯಂತ ಲಾಕ್ ಡೌನ್ ಮಾಡುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಭರವಸೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳೊಂದಿಗೆ ಸಂಪರ್ಕ ಹೊಂದಿದ್ದು, ಆಕ್ಸಿಜೆನ್ ಲಭ್ಯತೆ ಕುರಿತಂತೆ ಅವಲೋಕಿಸಿದ್ದಾರೆ ಎಂದು ಸಕ್ಸೇನಾ ತಿಳಿಸಿದರು.