ದೇಶಾದ್ಯಂತ ಸ್ವಚ್ಛತಾ ಅಭಿಯಾನ

ನವದೆಹಲಿ,ಅ.೧:ನಾಳೆ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಜಯಂತಿ. ಈ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಗಾಂಧಿ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ದೇಶಾದ್ಯಂತ ಸ್ವಚ್ಛತಾ ಅಭಿಯಾನಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಮಕ್ಕಳಿಂದ ಹಿಡಿದು ರಾಜಕೀಯ ನಾಯಕರವರೆಗೂ ಒಂದು ಗಂಟೆಯ ಶ್ರಮದಾನದಲ್ಲಿ ಪಾಲ್ಗೊಂಡರು. ಪಕ್ಷದ ಕಾರ್ಯಕರ್ತರರು, ನಾಗರಿಕರು ಸ್ವಯಂಪ್ರೇರಿತರಾಗಿ ಈ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.
ಪ್ರಧಾನಮಂತ್ರಿ ನರೇಂದ್ರಮೋದಿ ಅವರು ನವದೆಹಲಿಯ ಪಾರ್ಕ್‌ನಲ್ಲಿ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಪರಿಸರ ನೈರ್ಮಲ್ಯೀಕರಣದ ಬಗ್ಗೆ ಜಾಗೃತಿ ಮೂಡಿಸಿದರು. ಕುಸ್ತಿಪಟು ಅಂಕಿತ್ ಅವರೊಂದಿಗೆ ಪಾರ್ಕ್‌ನಲ್ಲಿ ಕಸ ಗುಡಿಸುವ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಚಿತ್ರವನ್ನು ಮೋದಿ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
ಇಂದು ದೇಶಾದ್ಯಂತ ಸ್ವಚ್ಛತೆಯತ್ತ ಗಮನ ಹರಿಸಿದೆ. ಅಂಕಿತ್ ಬಯನಪುರಿಯ ಮತ್ತು ತಾವು ಕೂಡ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದೆವು. ಕೇವಲ ಶುಚಿತ್ವದ ಹೊರತಾಗಿ ಫಿಟ್ನೆಸ್ ಮತ್ತು ಯೋಗಕ್ಷೇಮವನ್ನು ಸ್ವಚ್ಚಥೆಯೆ ಜತೆಗೆ ಸೇರ್ಪಡೆ ಮಾಡಿಕೊಂಡಿದ್ದೇವೆ. ಇದು ಸ್ವಚ್ಛ ಮತ್ತು ಸ್ವಸ್ತ್ ಭಾರತ್ ಎಂದು ಬರೆದುಕೊಂಡಿದ್ದಾರೆ.
ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಹಮದಾಬಾದ್‌ನಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರೆ, ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮುಖಂಡರಾದ ಮೀನಾಕ್ಷಿ ಲೇಖಿ ಮತ್ತಿತರ ಮುಖಂಡರು ಭಾಗವಹಿಸಿ ಸ್ವಚ್ಛತಾ ಕಾರ್ಯನಡೆಸಿದರು.
ಇಂದು ಬೆಳಿಗ್ಗೆ ೧೦ ಗಂಟೆಯಿಂದ ೧೧ ಗಂಟೆ ಕಾಲ ಸ್ವಚ್ಛತಾ ಸೇವಾ ಕಾರ್ಯ ನಡೆಯಲಿದ್ದು, ದೇಶಾದ್ಯಂತ ಸ್ವಚ್ಛತೆ ಮತ್ತು ನೈರ್ಮಲ್ಯದ ಮೇಲೆ ಗಮನಾರ್ಹ ಪರಿಣಾಮ ಬೀರಲಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪಾಲ್ಗೊಂಡು ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಿ ಪರಿಸರವನ್ನು ಕಾಪಾಡಿಕೊಳ್ಳಬೇಕೆಂದು ಅವರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ದೆಹಲಿ ವಿಶ್ವವಿದ್ಯಾಲಯದ ಇಂಟರ್‌ನ್ಯಾಷನಲ್ ಗೆಸ್ಟ್ ಹೌಸ್ ಬಳಿ ಗಣ್ಯರು ಆಗಮಿಸಿ ಸ್ಚಚ್ಛತಾ ಕಾರ್ಯ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಅಭಿಯಾನದಲ್ಲಿ ಭಾಗವಹಿಸಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರು.
ಕಳೆದ ತಿಂಗಳು ನಡೆದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಸ್ವಚ್ಛತೆಗಾಗಿ ದೊಡ್ಡ ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಿಮ್ಮ ಬೀದಿಗಳಲ್ಲಿ, ನೆರೆ-ಹೊರೆಯಲ್ಲಿ, ಉದ್ಯಾನವನ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳುವಂತೆ ಹೇಳಿದ್ದರು. ಈ ಕರೆಗೆ ಸಾರ್ವಜನಿಕರು, ಜನಪ್ರತಿನಿಧಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ದೇಶದೆಲ್ಲೆಡೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಸ್ವಚ್ಛ ಭಾರತ್ ಅಭಿಯಾನದ ೯ನೇ ವಾರ್ಷಿಕೋತ್ಸವವನ್ನು ಕೇಂದ್ರ ಸರ್ಕಾರ ದೇಶಾದ್ಯಂತ ಆಚರಿಸುತ್ತಿದ್ದು, ಈ ನಿಟ್ಟಿನಲ್ಲಿ ಹಲವು ವಿಭಿನ್ನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ೨೦೧೪ರಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಮೊದಲ ಬಾರಿಗೆ ಸ್ವಚ್ಛತಾ ಅಭಿಯಾನಕ್ಕೆ ಕರೆ ಕೊಟ್ಟಿದ್ದರು.