ದೇಶ್‌ಮುಖ್ ವಿರುದ್ಧದ ಆರೋಪ ಗಂಭೀರ : ಸುಪ್ರೀಂ

ನವದೆಹಲಿ, ಮಾ.೨೪-ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ೧೦೦ ಕೋಟಿ ಲಂಚ ಸಂಗ್ರಹಣೆಗೆ ಆದೇಸಿದ್ದು ಇದರ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಕೋರ್ಟ್ ಮೆಟ್ಟಿಲೇರಿದ್ದ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಮಾಡಿರುವ ಆರೋಪಗಳು ಅತ್ಯಂತ ಗಂಭೀರವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧದ ಆರೋಪಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು.
ಸಿಂಗ್ ಆರೋಪಿಸಿರುವ ಆರೋಪಗಳು ಅತ್ಯಂತ ಗಂಭೀರ ಸ್ವರೂಪದ್ದಾಗಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಸಿಬಿಐ ತನಿಖೆಗಾಗಿ ಕೋರಿ ಬಾಂಬೆ ಹೈಕೋರ್ಟ್ ಅನ್ನು ಏಕೆ ಸಂಪರ್ಕಿಸಲಿಲ್ಲ ಎಂದೂ ಸಹ ಸಿಂಗ್ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಪ್ರಶ್ನಿಸಿತು.

ಏನಿದು ಪ್ರಕರಣ?: ಕಳೆದ ತಿಂಗಳು ಫೆಬ್ರವರಿ ಮಧ್ಯಭಾಗದಲ್ಲಿ ಪೊಲೀಸ್ ಅಧಿಕಾರಿ ಸಚಿನ್ ವಾಜೆಯವರನ್ನು ಕರೆದು ಮುಂಬೈಯ ಹೊಟೇಲ್ ಮತ್ತು ಬಾರ್ ಗಳಿಂದ ಹಣ ಸಂಗ್ರಹಿಸುವಂತೆ ಅನಿಲ್ ದೇಶ್ ಮುಖ್ ಅವರು ಹೇಳಿದ್ದರು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದ ಪತ್ರದಲ್ಲಿ ಈ ಹಿಂದಿನ ಮುಂಬೈ ಪೊಲೀಸ್ ಕಮಿಷನರ್ ಪರಮ್ ಬಿರ್ ಸಿಂಗ್ ಆರೋಪಿಸಿದ್ದರು.

ಆದರೆ, ಈ ಬಗ್ಗೆ ರಾಜ್ಯಸರ್ಕಾರ ಕ್ರಮ ಕೈಗೊಂಡಿಲ್ಲ ತನಿಖೆಯನ್ನು ಸಿಬಿಐಗೆ ಒಪ್ಪಿಸಿ ಎಂದು ಪರಮ್ ಬಿರ್ ಸಿಂಗ್ ಸುಪ್ರೀಂ ಕದ ತಟ್ಟಿದರು.

ಈ ನಡುವೆ ಅಪಪ್ರಚಾರದ ಬಗ್ಗೆ ತೀವ್ರ ನೊಂದಿದ್ದು, ಪರಂ ಬಿರ್ ಸಿಂಗ್ ಅವರ ಆರೋಪದ ನಂತರ ಕಳೆದ ತಿಂಗಳು ಫೆಬ್ರವರಿ ಮಧ್ಯಭಾಗದಲ್ಲಿ ತಾವು ಆಸ್ಪತ್ರೆಯಲ್ಲಿದ್ದೆ ಎಂದು ನೇರವಾಗಿ ಸಾಬೀತುಪಡಿಸಲು ಇಚ್ಛಿಸುತ್ತೇನೆ. ನನ್ನ ವ್ಯಕ್ತಿತ್ವಕ್ಕೆ ಮತ್ತು ಗೃಹ ಇಲಾಖೆಗೆ ಕುಂದು ತರುವ ರೀತಿಯಲ್ಲಿ ಹಲವು ಟೀಕೆಗಳು ಕೇಳಿಬರುತ್ತಿವೆ