ದೇಶ್ ಮುಖ್ ರಾಜೀನಾಮೆಗೆ ಬಿಜೆಪಿ ಆಗ್ರಹ

ಮುಂಬೈ,ಮಾ.೨೧- ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿದರು

ಅಮಾನತುಗೊಂಡ ಇನ್ಸ್ ಪೆಕ್ಟರ್ ಸಚಿನ್ ವಾಜೆ ಮೂಲಕ ಗೃಹ ಸಚಿವರು ಪ್ರತಿ ತಿಂಗಳು ೧೦೦ ಕೋಟಿ ರೂಪಾಯಿ ಸಂಗ್ರಹ ಮಾಡುವಂತೆ ಸೂಚಿಸಿದ್ದರು ಎಂದು ವರ್ಗಾವಣೆಗೊಂಡ ಪೊಲೀಸ್ ಆಯುಕ್ತ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಬಿಜೆಪಿ ಆಗ್ರಹ ಮಾಡಿದೆ.

ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಮುಂದೆ ಅನುಮಾನಾಸ್ಪದ ವಾಹನ ನಿಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಸಚಿನ್ ವಾಜೆ ಅವರನ್ನು ಮುಂಬೈ ಪೊಲೀಸ್ ಆಯುಕ್ತ ಪರಂ ಬೀರ್ ಸಿಂಗ್ ವರ್ಗಾವಣೆ ಮಾಡಿದ್ದರು. ಈ ಪ್ರಕರಣದ ಬಳಿಕ ಮುಂಬೈ ಪೊಲೀಸ್ ಆಯುಕ್ತರನ್ನು ಗೃಹ ಸಚಿವರು ವರ್ಗಾವಣೆ ಮಾಡಿದ್ದರು.

ಇದೀಗ ಈ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುವಂತೆ ಮಾಡಿದೆ ಮಹಾರಾಷ್ಟ್ರದ ಮಿತ್ರಪಕ್ಷ ಕೂಡ ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದೆ.

ಗೃಹಸಚಿವರ ಬದಲಾವಣೆಯಲ್ಲ:

ಗೃಹಸಚಿವ ಅನಿಲ್ ದೇಶಮುಖ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿದ್ದಂತೆ ಎನ್ಸಿಪಿ ಹಿರಿಯ ನಾಯಕರೂ ಆಗಿರುವ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹಾಗು ಮತ್ತೊಬ್ಬ ಸಚಿವ ಜಯಂತ್ ಪಾಟೀಲ್ ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.

ಈ ಕುರಿತಂತೆ ಮಾತನಾಡಿದ ಜಯಂತ್ ಪಾಟೀಲ್ ಅವರು ಇದು ಪೂರ್ವ-ನಿರ್ಧಾರಿತ ಸಭೆ ಮುಂಬರುವ ವಿಧಾನಸಭೆ ಉಪಚುನಾವಣೆಯ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ಬದಲಾವಣೆ ಇಲ್ಲ ಎಂದು ಕೂಡ ಅವರು ಸ್ಪಷ್ಟಪಡಿಸಿದ್ದಾರೆ

ತನಿಖೆ ಮುಂದುವರಿಕೆ

ಸಚಿನ್ ವಾಜೆ ಅವರ ವಿರುದ್ಧ ರಾಷ್ಟ್ರೀಯ ತನಿಖಾ ದಳ ಮತ್ತು ಭಯೋತ್ಪಾದನಾ ನಿಗ್ರಹ ಪಡೆ ತನಿಖೆ ಆರಂಭಿಸಿದೆ ಎಂದು ಗೃಹಸಚಿವ ಅನಿಲ್ ದೇಶ್ ಮುಖ್ ತಿಳಿಸಿದ್ದಾರೆ.

ಮುಂಬೈ ನಗರ ಪೊಲೀಸ್ ಆಯುಕ್ತ ಪರಂ ಬೀರ್ ಸಿಂಗ್ ವರ್ಗಾವಣೆ ಮಾಡಿರುವ ಹಿನ್ನೆಲೆಯಲ್ಲಿ ಯಾವುದೇ ಅಡೆತಡೆಯಿಲ್ಲದೆ ತನಿಖೆ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ