ಬೀದರ್: ಅ.22:ನಗರದಲ್ಲಿ ಶನಿವಾರ ನಡೆದ ಅಮೃತ ಕಳಸ ಯಾತ್ರೆ ಸಾರ್ವಜನಿಕರ ಗಮನ ಸೆಳೆಯಿತು.
ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು ಹಾಗೂ ಯುವಕರು
ದೆಹಲಿಯಲ್ಲಿ ನಿರ್ಮಿಸುತ್ತಿರುವ ಅಮೃತ ವಾಟಿಕಾಕ್ಕಾಗಿ ಜಿಲ್ಲೆಯ ಎಂಟೂ ತಾಲ್ಲೂಕುಗಳಲ್ಲಿ ಸಂಗ್ರಹಿಸಲಾದ ಮಣ್ಣು ತುಂಬಿದ ಕಳಸಗಳೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸೊದ್ದಿನ್ ಮೊದಲಾದವರು ಮಣ್ಣಿನ ಕಳಸ ಕೈಯಲ್ಲಿ ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು.
ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭವಾದ ಮೆರವಣಿಗೆಯು ಶಿವಾಜಿ ವೃತ್ತ, ಅಂಬೇಡ್ಕರ್ ವೃತ್ತ, ಭಗ???ಸಿಂಗ್ ವೃತ್ತ, ಬಸವೇಶ್ವರ ವೃತ್ತ, ತಹಶೀಲ್ದಾರ್ ಕಚೇರಿ, ಜಿಲ್ಲಾ ನ್ಯಾಯಾಲಯ ಮಾರ್ಗವಾಗಿ ಹಾಯ್ದು ನಗರಸಭೆ ಕಚೇರಿಗೆ ತಲುಪಿ ಸಮಾರೋಪಗೊಂಡಿತು.
ಇದಕ್ಕೂ ಮುನ್ನ ಯಾತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಭಗವಂತ ಖೂಬಾ ಅವರು,
ದೆಹಲಿಯಲ್ಲಿ ನಿರ್ಮಿಸುತ್ತಿರುವ ಅಮೃತ ವಾಟಿಕಾಗೆ ದೇಶದ ಪ್ರತಿ ಗ್ರಾಮಗಳಿಂದಲೂ ಮಣ್ಣು ಸಂಗ್ರಹಿಸಲಾಗಿದೆ. ದೇಶ ಹಾಗೂ ಮಣ್ಣಿನ ಬಗ್ಗೆ ಅಭಿಮಾನ ಮೂಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಅಭಿಯಾನ ನಡೆಸಿದ್ದಾರೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಸಂಗ್ರಹಿಸಿದ ಮಣ್ಣಿನ ಕಳಸಗಳನ್ನು ಯುವಕರು ಬೆಂಗಳೂರಿಗೆ ಒಯ್ಯಲಿದ್ದಾರೆ. ಅಲ್ಲಿಂದ ವಿಶೇಷ ರೈಲು ಮೂಲಕ ದೆಹಲಿಗೆ ರವಾನೆಯಾಗಲಿದೆ ಎಂದು ತಿಳಿಸಿದರು.
ದೇಶದ ಎಲ್ಲೆಡೆಯಿಂದ ಬರುವ ಮಣ್ಣು ಕಳಸಗಳಿಗೆ ದೆಹಲಿಯಲ್ಲಿ ಸ್ವಾಗತಿಸಲಾಗುತ್ತದೆ. ಬಳಿಕ ಮಣ್ಣು ಅಮೃತ ವಾಟಿಕಾದಲ್ಲಿ ಹಾಕಲಾಗುತ್ತದೆ ಎಂದು ಹೇಳಿದರು.
ಭಾರತ ತೀವ್ರಗತಿಯಲ್ಲಿ ಪ್ರಗತಿ ಸಾಧಿಸುತ್ತಿದೆ. ದೇಶದ ಸ್ವಾತಂತ್ರ್ಯದ ಶತಮಾನೋತ್ಸವ ವೇಳೆಗೆ ವಿಶ್ವಗುರುವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿ, ನನ್ನ ದೇಶ, ನನ್ನ ಮಣ್ಣು ಅಭಿಯಾನ ದೇಶದ ಜನರಲ್ಲಿ ದೇಶಾಭಿಮಾನ ಜಾಗೃತಗೊಳಿಸಿದೆ. ಅಭಿಯಾನದ ಭಾಗವಾಗಿದ್ದು ನಮ್ಮೆಲ್ಲದ ಸುದೈವ ಎಂದು ಹೇಳಿದರು.
ಪವಿತ್ರ ಭಾರತದಲ್ಲಿ ಜನಿಸಿದ ನಾವೆಲ್ಲರೂ ಧನ್ಯರು. ಈ ಮಣ್ಣಿನ ಋಣ ತೀರಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ದೇಶ ಪ್ರೇಮ, ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದರು.
ನಿವೃತ್ತ ಕರ್ನಲ್ ಶರಣಪ್ಪ ಸಿಕೇನಪುರ, ನಿವೃತ್ತ ಮೇಜ???ಗಳಾದ ರಾಮ ಧಾವಲೆ, ಮಡೆಪ್ಪ ಹಾಲಹಳ್ಳಿಕರ್, ನಿವೃತ್ತ ಸುಬೆದಾರ್ ಧನರಾಜ ಸಾವರೆ ಅವರನ್ನು ಸನ್ಮಾನಿಸಲಾಯಿತು.
ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸೊದ್ದಿನ್, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ, ಅಂಚೆ ಅಧೀಕ್ಷಕ ಶ್ರೀಕರ ಬಾಬು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಗರಾಜ ಮಠ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕಿರಣ ಪಾಟೀಲ, ಮುಖ್ಯ ಪಶು ವೈದ್ಯಾಧಿಕಾರಿ ಡಾ. ಗೌತಮ ಅರಳಿ, ಶಿವಕುಮಾರ ಯಲಾಲ್, ರವಿಂದ್ರ ಕಾಂಬಳೆ, ಪ್ರವೀಣ ಸ್ವಾಮಿ, ಶಿವಶಂಕರ ಬೆಳಮಗಿ, ರೇವಣಸಿದ್ದಯ್ಯ ಸ್ವಾಮಿ, ಸತೀಶ್ ಬೆಳಕೋಟೆ ಇದ್ದರು.
ಜಿ.ಎನ್. ಮಠಪತಿ ಸ್ವಾಗತಿಸಿದರು. ರೇಣುಕಾ ಮಳ್ಳಿ ನಿರೂಪಿಸಿದರು. ಮಂಗಲಾ ಭಾಗವತ್ ವಂದಿಸಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ನೆಹರು ಯುವ ಕೇಂದ್ರ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಯಾತ್ರೆ ಹಮ್ಮಿಕೊಳ್ಳಲಾಗಿತ್ತು.