ದೈಹಿಕ ಮಾನಸಿಕ ಆರೋಗ್ಯಕ್ಕೆ ಪೌಷ್ಠಿಕ ಆಹಾರ ಸೇವನೆ ಅಗತ್ಯ: ಸುಧಾಕರ ಪೂಜಾರಿ

ಗುರುಮಠಕಲ್,ಡಿ.4-ಅಪೌಷ್ಠಿಕತೆ ಹೋಗಲಾಡಿಸುವ ಉದ್ದೇಶದಿಂದ ಸರ್ಕಾರ ಒಂದರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ಹಾಗೂ ಬಾಳೆ ಹಣ್ಣು ವಿತರಣೆ ಮಾಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಸುಧಾಕರ ಪೂಜಾರಿ ಕರೆ ನೀಡಿದರು.
ಚಂಡ್ರಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ಹಾಗೂ ಬಾಳೆ ಹಣ್ಣು ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರೌಢಶಾಲೆ ಯ ಎಸ್.ಡಿ.ಎಮ್.ಸಿ.ಅಧ್ಯಕ್ಷರು. ಶಿಕ್ಷಕರ ಸಂಘದ ಅಧ್ಯಕ್ಷ ರಾದ ನಾರಾಯಣ ರೆಡ್ಡಿ ಪೆÇ ಪಾಟಿಲ್.ಪುಟಪಾಕ ಸಿ ಆರ್ ಪಿ ಕ್ಲಸ್ಟರ್ ಸಿದ್ದಲಿಂಗಪ್ಪ. ಪ್ರೌಢಶಾಲೆಯ ಶಿಕ್ಷಕರು.ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳು ಹಾಗೂ ಶಾಲಾ ಮಕ್ಕಳು ಇತರರು ಇದ್ದರು.