ಬಳ್ಳಾರಿ,ಜೂ.22: ವ್ಯಕ್ತಿಯ ಸರ್ವ ಅಂಗಗಳೂ ಕೂಡ ಯೋಗಾಸನದಿದಂದ ಕ್ರಿಯಾಶೀಲಗೊಂಡು, ಆರೋಗ್ಯ ಮಟ್ಟವನ್ನು ವೃದ್ಧಿಸುತ್ತದೆ. ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗವು ಸಹಕಾರಿಯಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ ಇವರ ಸಹಯೋಗದಲ್ಲಿ “ವಸುದೈವ ಕುಟುಂಬಕ್ಕಾಗಿ ಯೋಗ’ ಧ್ಯೇಯವ್ಯಾಕ್ಯದೊಂದಿಗೆ ಬುಧವಾರದಂದು ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 9ನೇ ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಪ್ರತಿ ದಿನ ಯೋಗಭ್ಯಾಸ ಮಾಡುವುದನ್ನು ರೂಢಿಸಿಕೊಂಡು ಆರೋಗ್ಯವಂತರಾಗಿ ಬಾಳುವಂತೆ ಕರೆ ನೀಡಿದರು.
ಪತಂಜಲಿ ಯೋಗ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಪಿ.ರಾಮಬ್ರಹ್ಮಂ ಅವರು ಮಾತನಾಡಿ, ವಕೀಲರು ಒಂದು ಗಂಟೆಗಳ ಕಾಲಾವಕಾಶ ಯೋಗಭ್ಯಾಸಕ್ಕೆ ಮೀಸಲಿಟ್ಟರೆ ದಿನದ 23 ತಾಸು ಅದು ನಿಮ್ಮನ್ನು ಕಾಪಾಡುತ್ತದೆ ಎಂದು ಹೇಳಿದ ಅವರು, ಈ ಇದೇ ಸಂದರ್ಭದಲ್ಲಿ ಯೋಗಾಭ್ಯಾಸದ ಮಹತ್ವ ತಿಳಿಸುತ್ತಾ, ತಮ್ಮ ಸಮಿತಿ ಸದಸ್ಯರೊಂದಿಗೆ ಹಲವು ಯೋಗಾಸನಗಳ ಮೂಲಕ ನೆಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಬಳ್ಳಾರಿ ನಗರದ ಎಲ್ಲಾ ನ್ಯಾಯಾಧೀಶರುಗಳು, ವಕೀಲರ ಸಂಘದ ಅಧ್ಯಕ್ಷರಾದ ಕೆ.ಯರೇಗೌಡ ಮತ್ತು ಸಂಘದ ಕಾರ್ಯದರ್ಶಿ ಬಿ.ರವೀಂದ್ರನಾಥ್ ಸೇರಿದಂತೆ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.