ದೊಡ್ಡಹಟ್ಟಿ ಬೋರೇಗೌಡ ಟ್ರೇಲರ್ ಗೆ ಮೆಚ್ಚುಗೆ

ಗ್ರಾಮೀಣ ಸೊಗಡಿನ “ದೊಡ್ಡಹಟ್ಟಿ ಬೋರೇಗೌಡ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಮೆಚ್ಚುಗೆ ವ್ಯಕ್ತವಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ ಮುಂದಿನ ತಿಂಗಳು ಚಿತ್ರ ತೆರೆಗೆ ಬರಲಿದೆ

ಟ್ರೈಲರ್ ಬಿಡುಗಡೆ ವೇಳೆ ಮಾತಿಗಿಳಿದ ನಿರ್ದೇಶಕ ಕೆ‌.ಎಂ.ರಘು, “ದೊಡ್ಡಹಟ್ಟಿ ಬೋರೇಗೌಡ”  ಮನೆಯ ಸುತ್ತ ಹೆಣೆಯಲಾಗಿರುವ ಕಥೆ. ಹಳ್ಳಿಯಲ್ಲಿ ಬಡವರಿಗೆ ಸರ್ಕಾರದಿಂದ ನೀಡುವ ಆಶ್ರಯ ಯೋಜನೆ ಮನೆ  ಪಡೆದುಕೊಳ್ಳಲು ಯಾವರೀತಿ ಕಷ್ಟಪಡುತ್ತಾನೆ ಎಂಬುದನ್ನು ಚಿತ್ರದಲ್ಲಿ ತೋರಿಸಿದ್ದೇವೆ ಎಂದರು.

ಬೆಂಗಳೂರು ಅಂತರರಾಷ್ಟ್ರೀಯಚಿತ್ರೋತ್ಸವದಲ್ಲಿ ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿ ಕೂಡ ದೊರಕಿದೆ. ಇದು ಕಲಾತ್ಮಕ ಚಿತ್ರ ಅಲ್ಲ. ಕಮರ್ಷಿಯಲ್ ಚಿತ್ರ. ಚಿತ್ರದಲ್ಲಿ ಗ್ರಾಮೀಣ ಪ್ರತಿಭೆಗಳೇ ಅಭಿನಯಿಸಿರುವುದು ವಿಶೇಷ. ಮೂರು ತಿಂಗಳ ಕಾಲ ಎಲ್ಲರಿಗೂ ತರಬೇ ನೀಡಲಾಗಿದೆ ಎಲ್ಲರ ಸಹಕಾರವಿರಲಿ ಎಂದರು.

ನಟ ಶಿವಣ್ಣ ಬೀರಹುಂಡಿ,ಗ್ರಾಮ ಪಂಚಾಯತಿ ಸದಸ್ಯರನಾಗಿ ಕಾರ್ಯ ನಿರ್ವಹಿಸಿದ್ದೇನೆ. ರಂಗಭೂಮಿಯ ಅನುಭವವಿದೆ.‌ ಹಿರಿತೆರೆಯಲ್ಲಿ ಮೊದಲ ಚಿತ್ರ ಎಂದರು.

ಚಿತ್ರದಲ್ಲಿ ಅಭಿನಯಿಸಿರುವ ಗೀತಾ, ಲಾವಣ್ಯ, ಕಲಾರತಿ ಮಹದೇವ್, ಕಾತ್ಯಾಯಿನಿ, ಯೋಗೇಶ್ ಮುಂತಾದ ಅನುಭವ ಹಂಚಿಕೊಂಡರು. ನಿರ್ಮಾಪಕರಾದ ಶಶಿಕುಮಾರ್ ಬಿ ಸಿ ಹಾಗೂ ಲೋಕೇಶ್ ಕೆ.ಎಂ ಹಾಗೂ  ಬಿಡುಗಡೆಗೆ ಸಹಕಾರ ನೀಡಿರುವ ವೆಂಕಟೇಶ್ ಮತ್ತು  ಜಿ.ಅನ್ನಪೂರ್ಣ ಇದ್ದರು.