ದೊರಸ್ವಾಮಿಗೆ ಪ್ರಶಸ್ತಿ ಗರಿ

ಕೋಲಾರ, ನ.೩- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀ ಭುವನೇಶ್ವರಿ ಕನ್ನಡ ಸಂಘದ ಸಹಯೋಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಅಂತರಾಷ್ಟ್ರೀಯ ಕ್ರೀಡಾಪಟು ಜಿ.ದೊರಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
ಜಿ.ದೊರಸ್ವಾಮಿ ಅವರು ಕ್ರೀಡಾ ಕ್ಷೇತ್ರದಲ್ಲಿ ಸಲ್ಲಿಸಿದ ಅಮೋಘ ಸೇವೆಯನ್ನು ಗುರ್ತಿಸಿ ೨೦೨೨ರ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.