ಲಿಂಗಸುಗೂರು, ಅ. ೩೧- ತಾಲ್ಲೂಕಿನಾದ್ಯಂತ ನಡೆದಿರುವ ದೌರ್ಜನ್ಯ ಪ್ರಕರಣಗಳನ್ನು ಸಿಒಡಿ ತನಿಖೆಗೆ ಒಳಪಡಿಸಬೇಕೆಂದು ಮಲ್ಲಪ್ಪ ರೆಡ್ಡಿ, ಶಿವುರೆಡ್ಡಿ ಆಗ್ರಹಿಸಿದ್ದಾರೆ.
ತಾಲ್ಲೂಕಿನಾದ್ಯಂತ ಇದುವರೆಗೂ ಸಾಕಷ್ಟು ದೌರ್ಜನ್ಯ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತರಿಗೆ ರಕ್ಷಣೆ ಒದಗಿಸಬೇಕಾದ ಪೊಲೀಸರು ಆರೋಪಿಗಳ ರಕ್ಷಣೆಗೆ ಮುಂದಾಗಿದ್ದಾರೆ. ದೌರ್ಜನ್ಯ ಪ್ರಕರಣವೊಂದರ ಪ್ರಮುಖ ಆರೋಪಿಯಾಗಿರುವ ಪುರಸಭೆ ಮುಖ್ಯಾಧಿಕಾರಿ ರೆಡ್ಡಿ ರಾಯನ ಗೌಡ ಹಾಗೂ ಹಿಂದುಳಿದ ವರ್ಗಗಳ ವಸತಿ ನಿಲಯ ಪಾಲಕ ಶರಣಪ್ಪ, ಅವರನ್ನು ಇದುವರೆಗೂ ಬಂಧಿಸದೆ ಪೊಲೀಸರೇ ಅವರಿಗೆ ರಕ್ಷಣೆ ಒದಗಿಸುತ್ತಿದ್ದಾರೆ ಎಂದು ರೆಡ್ಡಪ್ಪ ಹಾಗೂ ಶಿವುರೆಡ್ಡಿ ಸುದ್ದಿಗೋಷ್ಠಿಯಲ್ಲಿ ಗೃಹ ಮಂತ್ರಿಗಳಿಗೆ ಆಗ್ರಹಿಸಿದರು.
ದೌರ್ಜನ್ಯ ಪ್ರಕರಣ ಸಂತ್ರಸ್ತರು ತೀವ್ರ ಭೀತಿಗೆ ಒಳಗಾಗಿದ್ದಾರೆ. ತಾಲ್ಲೂಕಿನ ಪೊಲೀಸ್ ಅಧಿಕಾರಿಗಳ ವಿರುದ್ಧ ಈ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಆರೋಪಿಗಳ ರಕ್ಷಣೆಗೆ ನಿಂತಿರುವ ಪೊಲೀಸರ ವಿರುದ್ಧ ಸೂಕ್ತ ಕ್ರಮ ಜರುಗಿಸುವ ಅಗತ್ಯವಿದೆ. ಕೆಲವು ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಬಿ ರಿಪೋರ್ಟ್ ದಾಖಲಿಸಿರುವುದು ಪೊಲೀಸರ ಮೇಲೆ ಜನತೆಗೆ ವಿಶ್ವಾಸವೇ ಇಲ್ಲದಂತಾಗಿದೆ. ಕೂಡಲೇ ಗೃಹ ಮಂತ್ರಿಗಳು ತಾಲ್ಲೂಕಿನಾದ್ಯಂತ ನಡೆದಿರುವ ಹಾಗೂ ವಿಶೇಷವಾಗಿ ಪುರಸಭೆ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ದೌರ್ಜನ್ಯ ಪ್ರಕರಣವನ್ನು ಸಿಒಡಿ ತನಿಖೆಗೆ ವಹಿಸಬೇಕು ಇಲ್ಲದಿದ್ದರೆ ಕಾನೂನು ಹೋರಾಟ ಅನಿವಾಂii ಎಂದು ಎಚ್ಚರಿಸಿದರು.