ದ್ರೌಪದಿ ಮುರ್ಮುಗೆ ಉದ್ಧವ್ ಠಾಕ್ರೆ ಬೆಂಬಲ

ಮುಂಬೈ, ಜು.12- ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವುದಾಗಿ ಶಿವಸೇನಾ ನಾಯಕ ಉದ್ದವ್ ಠಾಕ್ರೆ ಹೇಳಿದ್ದಾರೆ.
ಯಾವುದೇ ಒತ್ತಡವಿಲ್ಲದೆ ಮುರ್ಮು ಅವರನ್ನು ಬೆಂಬಲಿಸಲು ಶಿವಸೇನಾ ನಿರ್ಧರಿಸಿದೆ. ಶಿವಸೇನಾ ಸಂಸದರ ಸಭೆಯಲ್ಲಿ ಯಾರೂ ಕೂಡಾ ಒತ್ತಡ ಹಾಕಲಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗುವ ಅವಕಾಶವಿರುವುದಾಗಿ ಪಕ್ಷದ ಬುಡಕಟ್ಟು ಮುಖಂಡರು ಹೇಳಿರುವುದಾಗಿ ತಿಳಿಸಿದರು.
ಈ ತಿಂಗಳ 18ರಂದು ರಾಷ್ಟ್ರಪತಿ ಆಯ್ಕೆಗಾಗಿ ಚುನಾವಣೆ ನಡೆಯಲಿದೆ.