ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಇಬ್ಬರ ಸಾವು

ಮೈಸೂರು, ನ.22:- ಕಾರೊಂದು ದ್ವಿಚಕ್ರ ವಾಹನಕ್ಕೆ ಗುದ್ದಿದ ಪರಿಣಾಮ ದ್ವಿಚಕ್ರವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಇಲವಾಲ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಇಲವಾಲ ಹೊಸಕೋಟೆಯ ನಿವಾಸಿಗಳಾದ ವಿಶ್ವ (21), ವಿಷ್ಣು (19) ಎಂದು ಗುರುತಿಸಲಾಗಿದೆ. ಇವರು ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ವೇಳೆ ಕೆ.ಆರ್.ನಗರ ಕಡೆಯಿಂದ ವೇಗವಾಗಿ ಬಂದ ಕಾರೊಂದು ಇವರ ದ್ವಿಚಕ್ರವಾಹನಕ್ಕೆ ಗುದ್ದಿದೆ.
ಕಾರು ಗುದ್ದಿದ ರಭಸಕ್ಕೆ ಇಬ್ಬರು ಬೈಕಿನಿಂದ ಬಿದ್ದಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ.
ಮೃತದೇಹವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಇಲವಾಲ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.