ದ್ವಿಚಕ್ರ ವಾಹನಗಳ ವಿತರಣೆ

ಕಲಬುರಗಿ:ಮಾ.25: ಡಾ: ಬಿ.ಆರ್.ಅಂಬೇಡ್ಕರ ಅಬಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಭವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಬಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿಯಿಂದ ಕಲಬುರಗಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ 2022-23 ನೇ ಸಾಲಿನಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅದ್ಯಕ್ಷರೂ ಆಗಿರುವ ಕಲಬುರಗಿ ದಕ್ಷಿಣ ಮತಕ್ಷೇತ್ರದ ಜನಪ್ರೀಯ ಶಾಸಕರಾದ ಶ್ರೀ ದತ್ತಾತ್ರೇಯ ಪಾಟೀಲ ರೇವೂರ ರವರ ಅಧ್ಯಕ್ಷತೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ವಿಶಾಲ ಧರ್ಗಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅವಿನಾಶ ಕುಲಕರ್ಣಿ, ಖ್ಯಾತ ವೈದ್ಯರಾದ ಡಾ: ಅಲೋಕ ಸಿ.ಪಾಟೀಲ ರೇವೂರ, ಭಾರತೀಯ ಜನತಾ ಪಕ್ಷದ ನಗರ ಜಿಲ್ಲಾಧ್ಯಕ್ಷರಾದ ಸಿದ್ದಾಜಿ ಪಾಟೀಲ, ಕಲಬುರಗಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ವಕ್ತಾರರಾದ ಮಂಜುನಾಥ ನಾಲವಾರಕರ್, ಹಿರಿಯ ಮುಖಂಡರಾದ ಅಂಬಾರಾಯ ಬೆಳಕೋಟಿ, ಪಂಡಿತ ಸಾವಳಗಿ, ಮಡಿವಾಳಪ್ಪ ಮಡಿವಾಳ, ಸಲೀಮ ಭೀಮಳ್ಳಿ, ಆನಂದ ಚವ್ಹಾಣ, ನಾಗಲಿಂಗಯ್ಯ ಮಠಪತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಸುಮಾರು 100 ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು.